ADVERTISEMENT

ಭಯೋತ್ಪಾದನೆ ವಿರುದ್ಧ ಪ್ರಬಲ ಹೋರಾಟ: ಮೋದಿ–ನೆತನ್ಯಾಹು ದೃಢಸಂಕಲ್ಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಜನವರಿ 2026, 12:33 IST
Last Updated 7 ಜನವರಿ 2026, 12:33 IST
<div class="paragraphs"><p>ನರೇಂದ್ರ ಮೋದಿ, ಬೆಂಜಮಿನ್&nbsp;ನೆತನ್ಯಾಹು</p></div>

ನರೇಂದ್ರ ಮೋದಿ, ಬೆಂಜಮಿನ್ ನೆತನ್ಯಾಹು

   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಉಭಯ ದೇಶಗಳ ಕಾರ್ಯತಂತ್ರವನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತು ಇಂದು (ಬುಧವಾರ) ಚರ್ಚೆ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ ಮೂಲಕ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು, ಭಯೋತ್ಪಾದನೆ ಮಟ್ಟ ಹಾಕಲು ಮತ್ತಷ್ಟು ದೃಢನಿಶ್ಚಯದಿಂದ ಹೋರಾಡುವ ಅಗತ್ಯತೆಯನ್ನು ಪುನರುಚ್ಚರಿಸಿರುವುದಾಗಿ ತಿಳಿಸಿದ್ದಾರೆ.

ADVERTISEMENT

‘ನನ್ನ ಸ್ನೇಹಿತ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಲು ಮತ್ತು ಇಸ್ರೇಲ್ ಜನರಿಗೆ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಲು ಸಂತೋಷವಾಗಿದೆ’ ಎಂದಿದ್ದಾರೆ.

‘ಮುಂದಿನ ವರ್ಷದಲ್ಲಿ ಭಾರತ ಹಾಗೂ ಇಸ್ರೇಲ್ ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತು ನಾವು ಚರ್ಚಿಸಲಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.

ಸ್ಥಳೀಯ ವಿಚಾರಗಳ ಬಗ್ಗೆಯೂ ನೆತನ್ಯಾಹು ಅಭಿಪ್ರಾಯ ವಿನಿಮಯ ಮಾಡಿಕೊಂಡಿರುವುದಾಗಿ ಮೋದಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.