ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ನಾಯಕತ್ವದ ಮೂಲಕ ಕೋಟ್ಯಂತರ ಜನರ ಬದುಕು ಬದಲಿಸಿದ್ದಾರೆ. ರಾಷ್ಟ್ರ ಮೊದಲು ಎನ್ನುವ ಧೋರಣೆಯೊಂದಿಗೆ ಭಾರತವನ್ನು ಅಭಿವೃದ್ದಿಯತ್ತ ಕೊಂಡೊಯ್ಯುತ್ತಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಅವರು ಅಭಿಪ್ರಾಯಪಟ್ಟಿದ್ದಾರೆ.
ನರೇಂದ್ರ ಮೋದಿ ಅವರು ಗುಜರಾತ್‌ನ ಮುಖ್ಯಮಂತ್ರಿಯಾಗಿ ಮೊದಲ ಬಾರಿ ಪ್ರಮಾಣವಚನ ಸ್ವೀಕರಿಸಿ ಇಂದಿಗೆ(ಅ.7) 24 ವರ್ಷಗಳಾಗಿದೆ. 2014 ರಿಂದ ಪ್ರಧಾನ ಮಂತ್ರಿಯಾಗಿಯೂ ಮೋದಿ ಅವರು ಜನಸೇವೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ದೇಶಸೇವೆ ಹಾಗೂ ಜನಸೇವೆಗಾಗಿ ಪ್ರಧಾನಿ ಮೋದಿ ಅವರು 24 ವರ್ಷಗಳನ್ನು ಮುಡಿಪಾಗಿಟ್ಟಿದ್ದಾರೆ. ಜನರ ಸಮಸ್ಯೆಗಳನ್ನು ತಮ್ಮದೆಂದು ಭಾವಿಸಿ, ಅವರ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ ಎಂದು ‘ಎಕ್ಸ್’ನಲ್ಲಿ ಅಮಿತ್ ಶಾ ಅವರು ಪೋಸ್ಟ್ ಮಾಡಿದ್ದಾರೆ.
ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕರಿಸಿದ ನಂತರ ರೈತರು, ಮಹಿಳೆಯರು, ಶಿಕ್ಷಣ ಹಾಗೂ ಕೈಗಾರಿಕೆ ಸೇರಿದಂತೆ ಎಲ್ಲಾ ಕ್ಷೇತ್ರಗಳು ಕೂಡ ಅಭಿವೃದ್ದಿಯತ್ತ ಸಾಗುತ್ತಿವೆ. ದೇಶದ ಭದ್ರತೆಗೆ ಹೆಚ್ಚಿನ ಗಮನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.