ನವದೆಹಲಿ: ‘ಕೋವಿಡ್ 19‘ ಸಾಂಕ್ರಾಮಿಕ ರೋಗದಿಂದಾಗಿ ಸಂಕಷ್ಟದಲ್ಲೇ ಕಳೆದಿರುವ ಈ ವರ್ಷದ ಅನುಭವ ಮತ್ತು ಮುಂದಿನ ವರ್ಷ ಏನನ್ನು ನಿರೀಕ್ಷಿಸುತ್ತೀರಿ ಎಂಬುದರ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ತಮ್ಮ ಬಾನುಲಿ ಕಾರ್ಯಕ್ರಮ ‘ಮನ್ ಕಿ ಬಾತ್‘ ಈ ತಿಂಗಳ 27ರಂದು ಪ್ರಸಾರವಾಗಲಿದೆ. ಇದು ವರ್ಷದ ಕೊನೆಯ ಕಂತು. ಈ ಕಾರ್ಯಕ್ರಮ ಪ್ರಸಾರವಾಗುವುದರೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ‘ಮೈಗವ್ ನಮೊ ಆ್ಯಪ್‘ (MyGov, NaMo App)ಗೆ ಕಳುಹಿಸಬಹುದು. 1800–11–7800 ಕರೆ ಮಾಡಿ, ಧ್ವನಿ ಮೂಲಕವೂ ಅಭಿಪ್ರಾಯಗಳನ್ನು ದಾಖಲಿಸಬಹುದು ಎಂದು ಮೋದಿಯವರು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.