ನರೇಂದ್ರ ಮೋದಿ
(ಪಿಟಿಐ ಚಿತ್ರ)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಜಪಾನ್ ಪ್ರವಾಸ ಕೈಗೊಳ್ಳಲಿದ್ದಾರೆ.
ಈ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಾಹಿತಿ ನೀಡಿದ್ದಾರೆ.
ಪ್ರಧಾನಿ ಮೋದಿ ಅವರ ಜಪಾನ್ ಪ್ರವಾಸ ಶುಕ್ರವಾರ ಆರಂಭವಾಗಲಿದೆ. ಇಂಡೋ-ಫೆಸಿಫಿಕ್ ಹಾಗೂ ಅದರಾಚೆಗಿನ ಪ್ರದೇಶಗಳಲ್ಲಿ ಶಾಂತಿ, ಸಮೃದ್ಧಿ ಮತ್ತು ಸ್ಥಿರತೆಗೆ ಉಭಯ ದೇಶಗಳ ಬದ್ಧತೆಯನ್ನು ಮತ್ತಷ್ಟು ಗಟ್ಟಿಗೊಳಿಸಲಿದ್ದಾರೆ ಎಂದು ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ.
ಶಾಂಘೈ ಶೃಂಗದಲ್ಲೂ ಪ್ರಧಾನಿ ಭಾಗಿ...
ಜಪಾನ್ ಪ್ರವಾಸದ ಬಳಿಕ ಪ್ರಧಾನಿ ಮೋದಿ ಅವರು ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಈ ಸಂದರ್ಭದಲ್ಲಿ ಮಹತ್ವದ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.