ವಾರಾಣಸಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲೆಂದುತಮ್ಮ ಸ್ವಕ್ಷೇತ್ರ ವಾರಾಣಸಿಗೆ ಭಾನುವಾರ ಭೇಟಿ ನೀಡಿರುವ ನರೇಂದ್ರ ಮೋದಿ, ಅಲ್ಲಿನ ಜಂಗಮವಾಡಿ ಮಠಕ್ಕೂ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಭಾರತೀಯ ಭಕ್ತಿ ಪರಂಪರೆಗೆ ವೀರಶೈವ ಸಂಪ್ರದಾಯ ನೀಡಿರುವ ಕೊಡುಗೆಗಳನ್ನು ಸ್ಮರಿಸಿದ ಅವರು, ಪವಿತ್ರ ಗ್ರಂಥ ‘ಸಿದ್ಧಾಂತ ಶಿಖಾಮಣಿ’ಯ ಪ್ರಾಮುಖ್ಯತೆ ಬಗ್ಗೆ ಮಾತನಾಡಿದರು.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಸಂದರ್ಭ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.