
ಪಿಟಿಐ
ಕೋಲ್ಕತ್ತ ಪಶ್ಚಿಮಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ(ಎಸ್‌ಐಆರ್) ಭಾಗವಾಗಿ ನಡೆದ ವಿಚಾರಣೆಗೆ ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರು ಮಂಗಳವಾರ ಹಾಜರಾದರು.
‘ಶಮಿ ಅವರು ಅಗತ್ಯ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಎಸ್‌ಐಆರ್ ವೇಳೆ ಶಮಿ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ ವಾಸಸ್ಥಳದ ಮಾಹಿತಿಯಲ್ಲಿ ವ್ಯತ್ಯಾಸವಿತ್ತು. ಹಾಗಾಗಿ, ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿತ್ತು’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉತ್ತರಪ್ರದೇಶ ಮೂಲದ ಶಮಿ ಅವರು ಹಲವು ವರ್ಷಗಳಿಂದ ಪಶ್ಚಿಮಬಂಗಾಳದಲ್ಲಿ ನೆಲಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.