ADVERTISEMENT

ಸದನದಲ್ಲಿ ಪ್ರಶ್ನೆ ಕೇಳಲು ಲಂಚ: ನ. 5ರ ನಂತರ ವಿಚಾರಣೆಗೆ ಸಿದ್ಧ– ಸಂಸದೆ ಮಹುವಾ

ಪಿಟಿಐ
Published 27 ಅಕ್ಟೋಬರ್ 2023, 11:27 IST
Last Updated 27 ಅಕ್ಟೋಬರ್ 2023, 11:27 IST
<div class="paragraphs"><p>ಮಹುವಾ ಮೊಯಿತ್ರಾ</p></div>

ಮಹುವಾ ಮೊಯಿತ್ರಾ

   

ನವದೆಹಲಿ: ಪಶ್ಚಿಮ ಬಂಗಾಳದ ಕೃಷ್ಣನಗರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಮಹುವಾ ಮೊಯಿತ್ರಾ ಅವರು ಸದನದಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿಯೊಬ್ಬರಿಂದ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ತಿನ ನೀತಿ ನಿಯಮಗಳ ಸಮಿತಿಗೆ ಪತ್ರ ಬರೆದಿದ್ದು ಅಕ್ಟೋಬರ್‌ 31ರಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗದು ಎಂದು ತಿಳಿಸಿದ್ದಾರೆ.

ತೃಣಮೂಲ ಕಾಂಗ್ರೆಸ್‌ನ ಮಹುವಾ ಮೊಯಿತ್ರಾ ಅವರ ಸಂಸತ್ತಿನ ನೀತಿ ನಿಯಮಗಳ ಸಮಿತಿಗೆ ಈ ಬಗ್ಗೆ ಪತ್ರ ಬರೆದಿದ್ದಾರೆ. ಪೂರ್ವನಿಗದಿತ ಕಾರ್ಯಕ್ರಮಗಳಿಂದಾಗಿ ಅಕ್ಟೋಬರ್‌ 31ರಂದು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.  

ADVERTISEMENT

ಸದನದಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿಯೊಬ್ಬರಿಂದ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ 31ರಂದು ವಿಚಾರಣೆಗೆ ಹಾಜರಾಗಲು ಮಹುವಾ ಅವರಿಗೆ  ಸಮಿತಿ ಸೂಚಿಸಿತ್ತು.

ಸಮಿತಿ ಅಧ್ಯಕ್ಷ ವಿನೋದ್‌ ಕುಮಾರ್ ಸೋನ್ಕರ್ ಅವರಿಗೆ ಬರೆದಿರುವ ಮಹುವಾ ಅವರು ನವೆಂಬರ್ 5ರ ನಂತರ ನಿಗದಿಪಡಿಸುವ ಯಾವುದೇ ದಿನದಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮ ‘ಎಕ್ಸ್‌’ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಸಂದೇಶದಲ್ಲಿ, ‘ಸಮಿತಿ ಎದುರು ಹಾಜರಾಗಿ ನನ್ನ ವಿರುದ್ಧದ ಆರೋಪಗಳಿಗೆ ಸಮರ್ಥನೆ ನೀಡಲು ಕಾತುರಳಾಗಿದ್ದೇನೆ. ಆದರೆ, ಪೂರ್ವ ನಿಗದಿಯ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಅಕ್ಟೋಬರ್‌ 31ರಂದ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ, ನವೆಂಬರ್ 5ರ ನಂತರ ಯಾವ ದಿನ ಕರೆದರೂ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ. 

‘ಸಮಿತಿ ಅಧ್ಯಕ್ಷರು ಟಿ.ವಿ ಪ್ರಸಾರದಲ್ಲಿ ನನಗೆ ಸಮನ್ಸ್‌ ಜಾರಿ ಮಾಡಿರುವುದನ್ನು ತಿಳಿಸಿದ್ದಾರೆ. ಅಧಿಕೃತ ಇ–ಮೇಲ್‌ ಸಹ ಬಂದಿದೆ. ಎಲ್ಲ ದೂರು, ಸ್ವಯಂಪ್ರೇರಿತ ಪ್ರಮಾಣಪತ್ರಗಳನ್ನು ಈಗಾಗಲೇ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವೆ ಎಂದು ಮಹುವಾ ಉಲ್ಲೇಖಿಸಿದ್ದಾರೆ.

ಮಹುವಾ ಮೊಯಿತ್ರಾ ಅವರು ಸದನದಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿಯೊಬ್ಬರಿಂದ ಲಂಚ ಪಡೆದಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಅವರು ಆರೋಪಿಸಿದ್ದರು. ಅಲ್ಲದೆ ಈ ಬಗ್ಗೆ ತನಿಖಾ ಸಮಿತಿ ರಚನೆ ಮಾಡಬೇಕು ಎಂದು ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಮನವಿ ಮಾಡಿದ್ದರು.

ಅದಾನಿ ಸಮೂಹದ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನೆ ಮಾಡಲು ಹೀರಾನಂದಾನಿ ಸಮೂಹದ ಸಿಇಒ ದರ್ಶನ್ ಹೀರಾನಂದಾನಿ ಅವರಿಂದ ಮಹುವಾ ಲಂಚ ಪಡೆದಿದ್ದರು. ಗೌತಮ್ ಅದಾನಿಯನ್ನು ಗುರಿಯಾಗಿಸಿಕೊಂಡು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಡುಕು ಹಾಗೂ ಮುಜುಗರ ಉಂಟು ಮಾಡಲು ಪ್ರಯತ್ನಿಸಿದ್ದರು ಎಂದು ದುಬೆ ಅವರು ಸ್ಪೀಕರ್‌ಗೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ದೂರಿದ್ದಾರೆ.

ದುಬೆ ಅವರ ದೂರನ್ನು, ಸ್ಪೀಕರ್‌ ಓಂ ಬಿರ್ಲಾ ಅವರು ನೀತಿ ನಿಯಮ ಸಮಿತಿಗೆ ಒಪ್ಪಿಸಿದ್ದರು. ಮಹುವಾ ವಿರುದ್ಧ ವಿಚಾರಣೆ ಸಮಿತಿ ರಚನೆಯಾಗಿದ್ದು ಅಕ್ಟೋಬರ್‌ 31ರಂದ ವಿಚಾರಣೆಗೆ ಹಾಜರಾಗುವಂತೆ ಸಮಿತಿ ಸೂಚಿಸಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.