ಲಖನೌ: ‘ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿರುವ ಹೇಳಿಕೆಯು ಕ್ಷಮಾರ್ಹವಲ್ಲ. ಟಿಎಂಸಿ ಪಕ್ಷವು ಅವರ ಹೇಳಿಕೆಗೆ ದೇಶದ ಜನತೆಯ ಕ್ಷಮೆಯಾಚಿಸಬೇಕು’ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗ್ರಹಿಸಿದ್ದಾರೆ.
ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಹುವಾ ಮೊಯಿತ್ರಾ, ‘ಬಾಂಗ್ಲಾ ನುಸುಳುಕೋರರನ್ನು ತಡೆಯಲು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಫಲರಾಗಿದ್ದಾರೆ. ಅವರ ತಲೆಯನ್ನು ಕತ್ತರಿಸಿ, ಮೇಜಿನ ಮೇಲೆ ಇಡಬೇಕು’ ಎಂದು ಹೇಳಿಕೆ ನೀಡಿದ್ದರು.
‘ಟಿಎಂಸಿ ಸಂಸದೆ ಅಸಾಂವಿಧಾನಿಕ ಮತ್ತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಇದು ಅತ್ಯಂತ ಶೋಚನೀಯ. ಪ್ರಜಾಪ್ರಭುತ್ವ ಮೌಲ್ಯಗಳಲ್ಲಿ ನಂಬಿಕೆ ಇರಿಸಿರುವ ಪ್ರತಿಯೊಬ್ಬ ಭಾರತೀಯನಿಗೂ ಇದರಿಂದ ಅವಮಾನವಾಗಿದೆ‘ ಎಂದು ಯೋಗಿ ಆದಿತ್ಯನಾಥ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮಹುವಾ ಮೊಯಿತ್ರಾ ವಿರುದ್ಧ ಬಿಜೆಪಿಯು ಪಶ್ಚಿಮ ಬಂಗಾಳದ ಕೃಷ್ಣಾನಗರ ಠಾಣೆಯಲ್ಲಿ ದೂರು ದಾಖಲಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.