ADVERTISEMENT

ಅಕ್ರಮ ಹಣ ವರ್ಗಾವಣೆ: ದೇಶ್‌ಮುಖ್ ಆಪ್ತರ ಕಸ್ಟಡಿ ಅವಧಿ ಜು.6ವರೆಗೆ ವಿಸ್ತರಣೆ

ವಿಶೇಷ ನ್ಯಾಯಾಲಯದ ಆದೇಶ

ಪಿಟಿಐ
Published 1 ಜುಲೈ 2021, 10:45 IST
Last Updated 1 ಜುಲೈ 2021, 10:45 IST
ಐಸ್ಟಾಕ್: ಪ್ರಾತಿನಿಧಿಕ ಚಿತ್ರ
ಐಸ್ಟಾಕ್: ಪ್ರಾತಿನಿಧಿಕ ಚಿತ್ರ   

ಮುಂಬೈ: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್‌ ಅವರ ಇಬ್ಬರು ಆಪ್ತರ ಇ.ಡಿ ಕಸ್ಟಡಿ ಅವಧಿಯನ್ನು ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆ (ಪಿಎಂಎಲ್‌ಎ) ವಿಶೇಷ ನ್ಯಾಯಾಲಯ ಜು.6ರವರೆಗೆ ವಿಸ್ತರಿಸಿದೆ.

ದೇಶಮುಖ್ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಪಲಾಂಡೆ ಮತ್ತು ಆಪ್ತ ಸಹಾಯಕ ಕುಂದನ್ ಶಿಂಧೆ ಅವರನ್ನು ಜೂನ್ 26 ರಂದು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದರು. ಕಸ್ಟಡಿ ಅವಧಿ ಗುರುವಾರ ಮುಕ್ತಾಯಗೊಂಡ ಕಾರಣ ಅವರನ್ನು ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.