ADVERTISEMENT

ಹಣ ಅಕ್ರಮ ವರ್ಗಾವಣೆ: ಸೆ. 19ರ ತನಕ ಇಡಿ ವಶಕ್ಕೆ ದೀಪಕ್ ಕೊಚ್ಚರ್

ಚಂದಾ ಕೊಚ್ಚರ್ ಪತಿ ದೀಪಕ್ ಬಂಧನ

ಪಿಟಿಐ
Published 8 ಸೆಪ್ಟೆಂಬರ್ 2020, 11:27 IST
Last Updated 8 ಸೆಪ್ಟೆಂಬರ್ 2020, 11:27 IST
ದೀಪಕ್ ಕೊಚ್ಚರ್
ದೀಪಕ್ ಕೊಚ್ಚರ್   

ಮುಂಬೈ: ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಬಂಧಿತರಾಗಿರುವ ಐಸಿಐಸಿಐ ಬ್ಯಾಂಕ್‌ನ ಸಿಇಒ ಚಂದಾ ಕೊಚ್ಚರ್ ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಇಲ್ಲಿನ ನ್ಯಾಯಾಲಯ ಸೆ. 19ರ ತನಕ ಜಾರಿ ನಿರ್ದೇಶನಾಲಯದ (ಇ.ಡಿ) ವಶಕ್ಕೆ ನೀಡಿದೆ.

ಐಸಿಐಸಿಐ ಬ್ಯಾಂಕ್–ವಿಡಿಯೊಕಾನ್ ಹಣಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ದೀಪಕ್ ಅವರನ್ನು ಜಾರಿ ನಿರ್ದೇಶನಾಲಯವು ಸೋಮವಾರ ಬಂಧಿಸಿತ್ತು.

ಕಳೆದ ವರ್ಷ ಜನವರಿಯಲ್ಲಿ ಹಣಅಕ್ರಮ ವರ್ಗಾವಣೆ ವಿರೋಧಿ ಕಾನೂನಿನ ಕ್ರಿಮಿನಲ್ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸಂಗ್ರಹಿಸಲಾದ ಕೆಲವು ಹೊಸ ಸಾಕ್ಷ್ಯಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಲು ದೀಪಕ್ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.