
ಜಾರಿ ನಿರ್ದೇಶನಾಲಯ ಮತ್ತು ಅನಿಲ್ ಅಂಬಾನಿ
ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಫೆಬ್ರುವರಿ 26ರಂದು ವಿಚಾರಣೆಗೆ ಹಾಜರಾಗುವಂತೆ ರಿಲಯನ್ಸ್ ಸಮೂಹದ ಮುಖ್ಯಸ್ಥ ಅನಿಲ್ ಅಂಬಾನಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಹೊಸ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಅನಿಲ್ ಅಂಬಾನಿ ಅವರ ಪತ್ನಿ ಟೀನಾ ಅಂಬಾನಿ ಅವರಿಗೆ ಫೆಬ್ರುವರಿ 10 ಮತ್ತು 17ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ ಸೂಚಿಸಿತ್ತು. ಆದರೆ, ಅವರು ಹಾಜರಾಗಿಲ್ಲ. ಟೀನಾಗೆ ಇ.ಡಿ ಹೊಸ ದಿನಾಂಕ ನೀಡಿದೆಯೇ ಎಂಬುದು ಸ್ಪಷ್ಟವಾಗಿಲ್ಲ.
ರಿಲಯನ್ಸ್ ಸಮೂಹ ಮತ್ತು ಅದರ ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಅನಿಲ್ ಅಂಬಾನಿ ಅವರನ್ನು ಕಳೆದ ವರ್ಷ ವಿಚಾರಣೆಗೆ ಒಳಪಡಿಸಿತ್ತು.
ನ್ಯೂಯಾರ್ಕ್‌ನಲ್ಲಿ ಐಷಾರಾಮಿ ಕಟ್ಟಡವೊಂದರ ಖರೀದಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಟೀನಾ ಅವರನ್ನು ವಿಚಾರಣೆಗೆ ಕರೆಯಲಾಗಿದೆ.
ಅನಿಲ್ ಧೀರೂಭಾಯಿ ಅಂಬಾನಿ ಸಮೂಹದ ವಿರುದ್ಧದ ಬ್ಯಾಂಕ್ ವಂಚನೆ ಮತ್ತು ಅವ್ಯವಹಾರ ಪ್ರಕರಣಗಳ ಕುರಿತ ತನಿಖೆಗೆ ಇ.ಡಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.