ADVERTISEMENT

ಹಣ ಅಕ್ರಮ ವರ್ಗಾವಣೆ: SP ಶಾಸಕ ಇರ್ಫಾನ್ ಮೇಲೆ ಇ.ಡಿ ದಾಳಿ

ಪಿಟಿಐ
Published 7 ಮಾರ್ಚ್ 2024, 4:20 IST
Last Updated 7 ಮಾರ್ಚ್ 2024, 4:20 IST
<div class="paragraphs"><p>ಇ.ಡಿ</p></div>

ಇ.ಡಿ

   

ಲಕ್ನೊ: ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್ ಸೋಲಂಕಿ ಹಾಗೂ ಅವರ ಕುಟುಂಬ ಸದಸ್ಯರಿಗೆ ಸೇರಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

‌ಸಿಸಮೌ ಕ್ಷೇತ್ರದಿಂದ ನಾಲ್ಕನೇ ಬಾರಿ ಶಾಸಕರಾಗಿರುವ 44 ವರ್ಷದ ಸೋಲಂಕಿ, ಹಲವು ಕ್ರಿಮಿನಲ್ ಪ್ರಕರಣಗಳ ಸಂಬಂಧ 2022ರ ಡಿಸೆಂಬರ್‌ನಿಂದ ಮಹಾರಾಜಗಂಗ್ ಜೈಲಿನಲ್ಲಿದ್ದಾರೆ.

ADVERTISEMENT

ಭೂಮಿ ಕಸಿದುಕೊಳ್ಳಲು ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ನಡೆಸಿ, ಅವರ ಮನೆಯನ್ನು ಸೋಲಂಕಿ ಹಾಗೂ ಅವರ ಸಹೋದರ ಸೇರೊ ಸುಟ್ಟು ಹಾಕಿದ್ದರು. ಬಳಿಕ ಪೊಲೀಸರಿಗೆ ಶರಣಾಗಿದ್ದರು.

ಬಳಿಕ ಉತ್ತರ ಪ್ರದೇಶ ಗ್ಯಾಂಗ್‌ಸ್ಟರ್ಸ್ ಹಾಗೂ ಸಮಾಜ ಘಾತುಕ ಚಟುವಟಿಕೆ (ನಿಯಂತ್ರಣ) ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.