ADVERTISEMENT

ಅನಿಲ್ ದೇಶಮುಖ್ ವಿರುದ್ಧದ ಇ.ಡಿ ಪ್ರಕರಣ: ಸೆ. 29ರಂದು ಅರ್ಜಿ ವಿಚಾರಣೆ

ಪಿಟಿಐ
Published 23 ಸೆಪ್ಟೆಂಬರ್ 2021, 8:38 IST
Last Updated 23 ಸೆಪ್ಟೆಂಬರ್ 2021, 8:38 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ(ಇ.ಡಿ) ಹೊರಡಿಸಿರುವ ಸಮನ್ಸ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೆ.29 ರಂದು ನಡೆಸುವುದಾಗಿ ಬಾಂಬೆ ಹೈಕೋರ್ಟ್‌ ಗುರುವಾರ ಹೇಳಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್‌.ಎಸ್‌.ಶಿಂಧೆ ಮತ್ತು ಎನ್‌. ಜೆ. ಜಾಮದಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ, ‘ಈ ಮನವಿಗೆ ಸಂಬಂಧಿಸಿದಂತೆ ಅಗತ್ಯವಿದ್ದರೆ ಜಾರಿ ನಿರ್ದೇಶನಾಲಯ ಅಫಿಡವಿಟ್‌ ಸಲ್ಲಿಸಬಹುದು‘ ಎಂದು ಹೇಳಿದೆ.

ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರು ‘ಇದೊಂದು ರಾಜಕೀಯ ಸೇಡಿನ ಪ್ರಕರಣವಾಗಿದೆ. ಈ ಹಿನ್ನೆಲೆಯಲ್ಲಿ ನನ್ನ ವಿರುದ್ಧ ಹೊರಡಿಸಿರುವ ಐದು ಸಮನ್ಸ್‌ಗಳನ್ನು ರದ್ದುಗೊಳಿಸಬೇಕು‘ ಎಂದು ಕೋರಿ ತಿಂಗಳ ಆರಂಭದಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ADVERTISEMENT

ಗುರುವಾರ ಇ.ಡಿ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್‌ ಸಿಂಗ್‌, ಜಾರಿ ನಿರ್ದೇಶನಾಲಯದ ಪರಕೇಂದ್ರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಾಲಯಕ್ಕೆ ಹಾಜರಾಗಿ ವಾದ ಮಂಡಿಸಲು ಸಾಧ್ಯವಾಗುವಂತೆ, ಪ್ರಕರಣದ ವಿಚಾರಣೆಯನ್ನು ವರ್ಚುವಲ್‌ ಆಗಿ ನಡೆಸುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.