ADVERTISEMENT

ಕೇಜ್ರಿವಾಲ್ ನ್ಯಾಯಾಂಗ ಬಂಧನ ಜುಲೈ 3ರವರೆಗೆ ವಿಸ್ತರಣೆ

ಪಿಟಿಐ
Published 19 ಜೂನ್ 2024, 13:37 IST
Last Updated 19 ಜೂನ್ 2024, 13:37 IST
ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್   

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಇಲ್ಲಿನ ನ್ಯಾಯಾಲಯವು ಜುಲೈ 3ರವರೆಗೆ ವಿಸ್ತರಿಸಿದೆ. 

ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯು ಬುಧವಾರ ಮುಕ್ತಾಯವಾದ ಕಾರಣ, ಅವರನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯವು, ಕೇಜ್ರಿವಾಲ್ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. 

ವಿಚಾರಣೆ ವೇಳೆ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಬೇಕು ಎಂಬ ಜಾರಿ ನಿರ್ದೇಶನಾಲಯದ (ಇ.ಡಿ) ಕೋರಿಕೆಯನ್ನು ಕೇಜ್ರಿವಾಲ್ ಪರ ವಕೀಲರು ತೀವ್ರವಾಗಿ ವಿರೋಧಿಸಿದರು. ಇ.ಡಿ ಕೋರಿಕೆಯನ್ನು ಬೆಂಬಲಿಸಲು ಯಾವುದೇ ಆಧಾರಗಳಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.