ADVERTISEMENT

ಪಿಎಫ್‌ಐ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳದ 12 ಕಡೆ ಇ.ಡಿ ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಸೆಪ್ಟೆಂಬರ್ 2023, 6:18 IST
Last Updated 25 ಸೆಪ್ಟೆಂಬರ್ 2023, 6:18 IST
Venugopala K.
   Venugopala K.

ನವದೆಹಲಿ: ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ(ಪಿಎಫ್‌ಐ) ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು(ಇ.ಡಿ) ವಯನಾಡ್, ಕೋಯಿಕ್ಕೋಡ್ ಸೇರಿದಂತೆ ಕೇರಳದ 12 ಕಡೆಗಳಲ್ಲಿ ದಾಳಿ ನಡೆಸಿದೆ.

ಸಂಘಟನೆಗೆ ಸಂಬಂಧಿಸಿದ ಸ್ಥಳಗಳು, ಮಾಜಿ ನಾಯಕರ ಮನೆಗಳಲ್ಲಿ ಶೋಧ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಕಾನೂನುಬಾಹಿರ ಚಟುವಟಿಕೆ ಆರೋಪದಡಿ ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಲಾಗಿತ್ತು. ಸಂಘಟನೆಯ ಹಲವು ನಾಯಕರನ್ನು ಬಂಧಿಸಲಾಗಿತ್ತು.

ADVERTISEMENT

ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸಿನ ನೆರವಿಗೆ ಸಂಬಂಧಿಸಿದ ಪ್ರಕರಣದ ಕುರಿತಾಗಿ ಇ.ಡಿ ಪ್ರಮುಖವಾಗಿ ತನಿಖೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.