ADVERTISEMENT

ಅಕ್ರಮ ಹಣ ವರ್ಗಾವಣೆ ಪ್ರಕರಣ: ವಾದ್ರಾಗೆ ಸೂಚನೆ

ಪಿಟಿಐ
Published 25 ಫೆಬ್ರುವರಿ 2019, 19:25 IST
Last Updated 25 ಫೆಬ್ರುವರಿ 2019, 19:25 IST

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯದ (ಇ.ಡಿ) ವಿಚಾರಣೆಗೆ ತಡೆ ಕೋರಿ ರಾಬರ್ಟ್‌ ವಾದ್ರಾ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದೆ.

ಮಂಗಳವಾರ ಇ.ಡಿ ಎದುರುವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಇದೇ ವೇಳೆವಾದ್ರಾ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿವಶಪಡಿಸಿಕೊಂಡಿದ್ದ ದಾಖಲೆಗಳಪ್ರತಿಗಳನ್ನು ಐದು ದಿನಗಳೊಳಗೆ ವಾದ್ರಾಗೆ ಒದಗಿಸುವಂತೆವಿಶೇಷ ಸಿಬಿಐ ನ್ಯಾಯಾಧೀಶ ಅರವಿಂದ್‌ ಕುಮಾರ್‌ ನಿರ್ದೇಶಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.