ADVERTISEMENT

ಹಣ ಅಕ್ರಮ ವರ್ಗಾವಣೆ: ಜಾರ್ಖಂಡ್‌ನ ಮಾಜಿ ಸಚಿವ ಎಕ್ಕಾ ದೋಷಿ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2020, 20:15 IST
Last Updated 21 ಮಾರ್ಚ್ 2020, 20:15 IST

ನವದೆಹಲಿ/ರಾಂಚಿ (ಪಿಟಿಐ): ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್‌ನ ಮಾಜಿ ಸಚಿವ ಅನೋಶ್‌ ಎಕ್ಕಾ ತಪ್ಪಿತಸ್ಥ ಎಂದು ಜಾರ್ಖಂಡ್ ಕೋರ್ಟ್‌ ಶನಿವಾರ ತೀರ್ಪು ನೀಡಿದೆ.

ಶಿಕ್ಷೆಯ ಪ್ರಮಾಣವನ್ನು ಮಾರ್ಚ್‌ 31ರಂದು ಪ್ರಕಟಿಸಲಾಗುವುದು ಎಂದು ಕೋರ್ಟ್‌ ಹೇಳಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಇತರರ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎಕ್ಕಾ ಸಹ ಆರೋಪಿಯಾಗಿದ್ದರು. ಈ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾದವರ ಪೈಕಿ ಇವರು 11ನೆಯವರು.

ಕೋಡಾ ಸಂಪುಟದಲ್ಲಿ ಎಕ್ಕಾ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು.2009ರಲ್ಲಿ ಹಗರಣ ಪತ್ತೆ ಹಚ್ಚಿ, ತನಿಖೆ ಆರಂಭಿಸಿದ ಜಾರಿ ನಿರ್ದೇಶನಾಲಯ (ಇ.ಡಿ), ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತು. 2014ರಲ್ಲಿ ಎಕ್ಕಾಗೆ ಸೇರಿದ ₹ 100 ಕೋಟಿ ಮೌಲ್ಯದ ಆಸ್ತಿಯನ್ನು ಇ.ಡಿ ಮುಟ್ಟುಗೋಲು ಹಾಕಿಕೊಂಡಿತು.ಎಕ್ಕಾ ತಮ್ಮ ಆದಾಯಕ್ಕೂ ಮೀರಿದ ₹ 17 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದನ್ನು ಸಿಬಿಐ ಪತ್ತೆ ಹಚ್ಚಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.