ನವದೆಹಲಿ: ಉದ್ಯಮಿ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಪವರ್‌ನ ಸಿಎಫ್‌ಒ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ.
₹68 ಕೋಟಿ ನಕಲಿ ಬ್ಯಾಂಕ್ ಗ್ಯಾರಂಟಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಎಫ್‌ಒ ಅಶೋಕ್ ಪಾಲ್ ಅವರನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ.
ಮ್ಯಾಜಿಸ್ಟ್ರೇಟ್ ಮುಂದೆ ಅಶೋಕ್ ಅವರನ್ನು ಶನಿವಾರ ಹಾಜರುಪಡಿಸಿದ ಇ.ಡಿ., ಎರಡು ದಿನ ಕಸ್ಟಡಿಗೆ ಪಡೆಯಿತು. ಸೋಮವಾರ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.