ADVERTISEMENT

ಶಿಕ್ಷಣದ ಭಾಗವಾಗಿ ಹಣಕಾಸು ನಿರ್ವಹಣೆ: ತೇಜಸ್ವಿ ಸೂರ್ಯ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2022, 20:30 IST
Last Updated 15 ಡಿಸೆಂಬರ್ 2022, 20:30 IST
ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ   

ನವದೆಹಲಿ: ಶಾಲೆ ಮತ್ತು ಕಾಲೇಜುಗಳಲ್ಲಿ ಹಣಕಾಸು ನಿರ್ವಹಣೆ, ಅರ್ಥಿಕ ಸಾಕ್ಷರತೆ ವಿಷಯಗಳಿಗೆ ಒತ್ತು ನೀಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಒತ್ತಾಯಿಸಿದರು.

ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯದಕುರಿತು ಗಮನ ಸೆಳೆದಿರುವ ಅವರು, ‘ಭಾರತದ ಯುವಜನತೆ ಹೆಚ್ಚಿನ ಪ್ರಮಾಣದಲ್ಲಿ ಔದ್ಯೋಗಿಕ ರಂಗದಲ್ಲಿ ಗಣನೀಯ ಪ್ರಮಾಣದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆರ್ಥಿಕ ಸಾಕ್ಷರತೆಯು ಅವರಲ್ಲಿ ಭವಿಷ್ಯದ ಹಣಕಾಸು ನಿರ್ವಹಣೆಗೆ ಅನುಕೂಲ ಕಲ್ಪಿಸುವುದರ ಜೊತೆಗೆ, ಸಾಲದ ಸುಳಿ, ನಕಲಿ, ಹಣಕಾಸು ವಂಚನೆಗೆ ಒಳಗಾಗುವುದನ್ನು ತಪ್ಪಿಸಲು ಸಹಕಾರಿಯಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT