
ಪ್ರಜಾವಾಣಿ ವಾರ್ತೆ
ನವದೆಹಲಿ: ದೆಹಲಿಯಲ್ಲಿ ನೆಲೆಸಿರುವ ನೈಜಿರಿಯಾದ ಪ್ರಜೆಗೆ ಮಂಕಿಪಾಕ್ಸ್ ಸೋಂಕು ಇರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ವ್ಯಕ್ತಿಗೆ ವಿದೇಶ ಪ್ರಯಾಣದ ಹಿನ್ನೆಲೆ ಇರಲಿಲ್ಲ.ವಾರದ ಹಿಂದೆ ಪಶ್ಚಿಮ ದೆಹಲಿಯ ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿತ್ತು.
ಕೇರಳದಲ್ಲಿ ಮೃತಪಟ್ಟ 22 ವರ್ಷದಯುವಕನಲ್ಲಿಮಂಕಿಪಾಕ್ಸ್ ಸೋಂಕು ಇರುವುದು ಪ್ರಯೋಗಾಲಯದ ಪರೀಕ್ಷೆಯಲ್ಲಿ ಖಚಿತವಾಗಿದೆ. ದೇಶದಲ್ಲಿ ಈವರೆಗೆ ಆರು ಪ್ರಕರಣಗಳು ವರದಿಯಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.