ADVERTISEMENT

ಸೆಪ್ಟೆಂಬರ್‌ನಲ್ಲಿ ಮುಂಗಾರು ಮತ್ತೆ ಚುರುಕು: ಐಎಂಡಿ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2023, 13:39 IST
Last Updated 31 ಆಗಸ್ಟ್ 2023, 13:39 IST
<div class="paragraphs"><p>ಮುಂಗಾರು ಚುರುಕು</p></div>

ಮುಂಗಾರು ಚುರುಕು

   

ನವದೆಹಲಿ (ಪಿಟಿಐ): ನೈಋತ್ಯ ಮುಂಗಾರು ವಾರಾಂತ್ಯದಲ್ಲಿ ಮತ್ತೆ ಚುರುಕುಗೊಳ್ಳುವ ಸಾಧ್ಯತೆ ಇದ್ದು, ದೇಶದ ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿ ಮಳೆಯಾಗಲಿದೆ ಎಂದು‌ ಭಾರತೀಯ ಹವಾಮಾನ ಇಲಾಖೆ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ. 

ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೊಹಾಪಾತ್ರ, ಸೆಪ್ಟೆಂಬರ್‌ನಲ್ಲಿ ವಾಡಿಕೆ ಮಳೆ ಆಗುವ ಸಾಧ್ಯತೆ ಇದೆ. ದೀರ್ಘಾವಧಿಯ ಸರಾಸರಿ ಮಳೆ ಪ್ರಮಾಣ 167.9 ಮಿ.ಮೀ.ನ ಶೇಕಡ 91-109 ರಷ್ಟು ಮಳೆ ಬೀಳುವ ನಿರೀಕ್ಷೆ ಇದೆ ಎಂದು ಹೇಳಿದರು.

ADVERTISEMENT

ಸೆಪ್ಟೆಂಬರ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಬಿದ್ದರೂ, ಜೂನ್-ಸೆಪ್ಟೆಂಬರ್ ಅವಧಿಯಲ್ಲಿನ ಮಳೆ ಪ್ರಮಾಣ ವಾಡಿಕೆಗಿಂತ ಕಡಿಮೆಯೇ ಇರಲಿದೆ ಎಂದು ಮೊಹಾಪಾತ್ರ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.