ADVERTISEMENT

ನಾಲ್ಕೈದು ದಿನಗಳಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ: ಹವಾಮಾನ ಇಲಾಖೆ

ಪಿಟಿಐ
Published 20 ಮೇ 2025, 9:54 IST
Last Updated 20 ಮೇ 2025, 9:54 IST
   

ನವದೆಹಲಿ: ನಾಲ್ಕೈದು ದಿನಗಳಲ್ಲಿ ಕೇರಳಕ್ಕೆ ನೈರುತ್ಯ ಮುಂಗಾರು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. 

ನಿರೀಕ್ಷೆಯಂತೆ, ಮುಂಗಾರು ಪ್ರವೇಶಿಸಿದರೆ, 2009ರ ನಂತರ, ವಾಡಿಕೆಗಿಂತಲೂ ಮುಂಚಿತವಾಗಿ ಭಾರತದ ಮುಖ್ಯಭಾಗದಲ್ಲಿ ಮುಂಗಾರು ಪ್ರವೇಶಿಸುತ್ತಿರುವುದು ಇದೇ ಮೊದಲು (2009ರಲ್ಲಿ ಮೇ 23ರಂದು ಮುಂಗಾರು ಪ್ರವೇಶಿಸಿತ್ತು) ಎಂದು ಐಎಂಡಿ ತಿಳಿಸಿದೆ. 

‘ಕೇರಳದಲ್ಲಿ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶಕ್ಕೆ ಅನುಕೂಲಕರವಾದ ಪರಿಸ್ಥಿತಿಯಿದೆ’ ಎಂದು ಐಎಂಡಿ ಪ್ರಕಟಣೆಯಲ್ಲಿ ತಿಳಿಸಿದೆ. 

ADVERTISEMENT

ಸಾಮಾನ್ಯವಾಗಿ ನೈರುತ್ಯ ಮುಂಗಾರು ಜೂನ್‌ 1ರಂದು ಕೇರಳಕ್ಕೆ ಪ್ರವೇಶಿಸುತಿತ್ತು. ಜುಲೈ 8ರ ಒಳಗಾಗಿ ಇಡೀ ದೇಶವನ್ನು ಆವರಿಸಿಕೊಳ್ಳುತ್ತದೆ. ಸೆಪ್ಟೆಂಬರ್‌ 17ರ ಸುಮಾರಿಗೆ ವಾಯವ್ಯ ಭಾರತದಿಂದ ಸ್ಥಳಾಂತರಗೊಂಡು, ಅಕ್ಟೋಬರ್‌ 15ರ ಹೊತ್ತಿಗೆ ಸಂಪೂರ್ಣವಾಗಿ ಕೊನೆಗೊಳ್ಳುತ್ತದೆ.

ಕಳೆದ ವರ್ಷ ಮೇ 30ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಿತ್ತು. 2023ರಲ್ಲಿ ಜೂನ್ 8, 2022 ರಲ್ಲಿ ಮೇ 29, 2021 ರಲ್ಲಿ ಜೂನ್ 3, 2020ರಲ್ಲಿ ಜೂನ್ 1, 2019 ರಲ್ಲಿ ಜೂನ್ 8 ಮತ್ತು 2018 ರಲ್ಲಿ ಮೇ 29 ರಂದು ಮಾನ್ಸೂನ್ ಕೇರಳಕ್ಕೆ ಪ್ರವೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.