ADVERTISEMENT

ಜೂನ್‌ 1ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ

ಪಿಟಿಐ
Published 28 ಮೇ 2020, 20:37 IST
Last Updated 28 ಮೇ 2020, 20:37 IST
ಕೊಚ್ಚಿ ಸಮುದ್ರ ತೀರದಲ್ಲಿ ದಟ್ಟೈಸಿರುವ ಮೋಡ
ಕೊಚ್ಚಿ ಸಮುದ್ರ ತೀರದಲ್ಲಿ ದಟ್ಟೈಸಿರುವ ಮೋಡ   

ನವದೆಹಲಿ: ಮೇಲ್ಮೈ ಸುಳಿಗಾಳಿ ಪ್ರಭಾವದಿಂದಾಗಿ ಜೂನ್‌ 1ರಂದೇ ಕೇರಳಕ್ಕೆ ನೈರುತ್ಯ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ತಿಳಿಸಿದೆ.

ಜೂನ್‌ 5ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಐಎಂಡಿಮೇ 15ರಂದು ತಿಳಿಸಿತ್ತು. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪ್ರಭಾವದಿಂದಾಗಿ ಮುಂಗಾರು ಮಾರುತಗಳು ಚುರುಕಾಗಿವೆ ಎಂದು ಐಎಂಡಿ ತಿಳಿಸಿದೆ.

‘ಅರಬ್ಬಿ ಸಮುದ್ರದಲ್ಲಿ ಮೇ 31ರಿಂದ ಜೂನ್‌ 4ರವರೆಗೆ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಲಿದ್ದು, ಇದು ನೈರುತ್ಯ ಮುಂಗಾರು ಮಾರುತಗಳ ಪ್ರವೇಶಕ್ಕೆ ಅನುಕೂಲಕರ ವಾತಾವರಣ ಕಲ್ಪಿಸಲಿದೆ. ಈ ವರ್ಷ ಮುಂಗಾರಿನಲ್ಲಿ ವಾಡಿಕೆ ಮಳೆಯಾಗಲಿದೆ’ ಎಂದು ಇಲಾಖೆ ಮಾಹಿತಿ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.