ತಿರುವನಂತಪುರ: ಕೇರಳದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳ ಕೆಲವು ಪ್ರದೇಶಗಳು ಪ್ರವಾಹಕ್ಕೆ ಒಳಗಾಗಿವೆ. ಈ ಹಿನ್ನೆಲೆ ಇಂದು (ಗುರುವಾರ) ರಾಜ್ಯದ ಏಳು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್ ಘೋಷಿಸಿದೆ.
ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೋಟಯಂ, ಇಡುಕ್ಕಿ, ಎರ್ನಾಕುಲಂ ಮತ್ತು ತ್ರಿಶೂರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಏತನ್ಮಧ್ಯೆ, ವಯನಾಡ್ ಜಿಲ್ಲೆಯ ಮುಂಡಕ್ಕೈ-ಚೂರಲ್‌ಮಲ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಚೂರಲ್‌ಮಲ ನದಿಯಲ್ಲಿ ಭಾರಿ ಪ್ರವಾಹ ಉಂಟಾಗಿದೆ.
ಕಳೆದ ವರ್ಷ ಜುಲೈನಲ್ಲಿ ಈ ಪ್ರದೇಶದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ 200ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.