ADVERTISEMENT

ವಾಡಿಕೆಗಿಂತ ಮುನ್ನ ದೆಹಲಿಗೆ ಮುಂಗಾರು ಪ್ರವೇಶ ಸಾಧ್ಯತೆ: 2013ರ ನಂತರ ಇದೇ ಮೊದಲು

ಪಿಟಿಐ
Published 23 ಜೂನ್ 2025, 4:11 IST
Last Updated 23 ಜೂನ್ 2025, 4:11 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರದ ಹೆಚ್ಚಿನ ಭಾಗಗಳು ಹಾಗೂ ಪಂಜಾಬ್‌ನ ಕೆಲವು ಭಾಗಗಳಿಗೆ ಮುಂಗಾರು ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ತಿಳಿಸಿದೆ.

ಮುಂದಿನ ಎರಡು ದಿನಗಳಲ್ಲಿ ರಾಜಸ್ಥಾನ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದ ಉಳಿದ ಭಾಗಗಳಿಗೆ ಮಾನ್ಸೂನ್ ಚಲಿಸಲು ಅನುಕೂಲಕರವಾದ ಪರಿಸ್ಥಿತಿಯಿದೆ ಎಂದು ಅದು ಹೇಳಿದೆ.

ADVERTISEMENT

ಆರಂಭಿಕ ನಿರೀಕ್ಷೆಯಂತೆ ಜೂನ್ 24ರಂದು ದೆಹಲಿಗೆ ಮುಂಗಾರು ಪ್ರವೇಶಿಸಿದರೆ, 2013ರ ನಂತರ ವಾಡಿಕೆಗಿಂತಲೂ ಮುಂಚಿತವಾಗಿ ನಗರಕ್ಕೆ ಮುಂಗಾರು ಪ್ರವೇಶಿಸುತ್ತಿರುವುದು ಇದೇ ಮೊದಲು ( 2013ರಲ್ಲಿ ಜೂನ್ 16 ರಂದು ಮುಂಗಾರು ಪ್ರವೇಶಿಸಿತ್ತು) ಎಂದು ಐಎಂಡಿ ತಿಳಿಸಿದೆ.

ಕಳೆದ ವರ್ಷ ಜೂನ್ 28 ರಂದು ದೆಹಲಿಗೆ ಮುಂಗಾರು ಪ್ರವೇಶಿಸಿತ್ತು. 2023ರಲ್ಲಿ ಜೂನ್ 25ರಂದು, 2022ರಲ್ಲಿ ಜೂನ್ 30, 2021ರಲ್ಲಿ ಜುಲೈ 13 ರಂದು ಮಾನ್ಸೂನ್ ದೆಹಲಿಗೆ ಪ್ರವೇಶಿಸಿತ್ತು.

ಜೂನ್ 26ರವರೆಗೆ ಮಧ್ಯಪ್ರದೇಶ, ಗುಜರಾತ್ ಮತ್ತು ಕೊಂಕಣ ಮತ್ತು ಗೋವಾದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ವರ್ಷ ಮೇ 24ರಂದು ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಿತ್ತು. 2009ರ ನಂತರ ವಾಡಿಕೆಗಿಂತಲೂ ಮುಂಚಿತವಾಗಿ ಭಾರತದ ಮುಖ್ಯಭಾಗದಲ್ಲಿ ಮುಂಗಾರು ಪ್ರವೇಶಿಸಿದ್ದು ಇದೇ ಮೊದಲು (2009ರಲ್ಲಿ ಮೇ 23ರಂದು ಮುಂಗಾರು ಪ್ರವೇಶಿಸಿತ್ತು) ಎಂದೂ ಐಎಂಡಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.