ನವದೆಹಲಿ: ನೈಋತ್ಯ ಮುಂಗಾರು ಅವಧಿಗೂ ಮುನ್ನವೇ ಕೇರಳ ಪ್ರವೇಶಿಸುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಸಾಮಾನ್ಯವಾಗಿ ಜೂನ್ 1ರಂದು ಮುಂಗಾರು ಮಾರುತವು ಕೇರಳ ಪ್ರವೇಶಿಸುತ್ತಿದ್ದು, ಈ ಬಾರಿ ಮೇ 31ರಂದೇ ಆಗಮಿಸುವ ನಿರೀಕ್ಷೆ ಇದೆ.
ಈ ಬಾರಿ ಮೇ 22ರಂದಲೇ ನೈಋತ್ಯ ಮುಂಗಾರು ಅಂಡಮಾನ್ ಪ್ರದೇಶದಲ್ಲಿ ಹಾದು ಬರಬಹುದೆಂದು ನಿರೀಕ್ಷಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ಅರಬಿ ಸಮುದ್ರದಲ್ಲಿ ಚಂಡಮಾರುತ ರೂಪುಗೊಳ್ಳುತ್ತಿರುವ ನಡುವೆಯೇ ನೈಋತ್ಯ ಮಾರುತವೂ ಪ್ರಬಲಗೊಳ್ಳುತ್ತಿದೆ ಎಂದು ಇಲಾಖೆ ಹೇಳಿದೆ.
ಈ ವರ್ಷ ವಾಡಿಕೆಯಂತೆ ಸಾಮಾನ್ಯ ಮುಂಗಾರು ಮಳೆಯಾಗಲಿದೆ ಎಂದೂ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.