ADVERTISEMENT

ಮೊಸೆವಾಲಾ ಹಂತಕರನ್ನು ಶೀಘ್ರದಲ್ಲೇ ಜೈಲಿಗೆ ಅಟ್ಟಲಾಗುವುದು: ಪಂಜಾಬ್ ಸಿಎಂ

ಐಎಎನ್ಎಸ್
Published 3 ಜೂನ್ 2022, 14:26 IST
Last Updated 3 ಜೂನ್ 2022, 14:26 IST
ಸಿಧು ಮೂಸೆವಾಲಾ ತಂದೆ ಬಲ್‌ಕೌರ್ ಸಿಂಗ್ ಅವರನ್ನು ಸಂತೈಸುತ್ತಿರುವ ಪಂಜಾಬ್ ಸಿಎಂ ಭಗವಂತ್ ಮಾನ್
ಸಿಧು ಮೂಸೆವಾಲಾ ತಂದೆ ಬಲ್‌ಕೌರ್ ಸಿಂಗ್ ಅವರನ್ನು ಸಂತೈಸುತ್ತಿರುವ ಪಂಜಾಬ್ ಸಿಎಂ ಭಗವಂತ್ ಮಾನ್    

ಚಂಡೀಗಡ: ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಹಂತಕರನ್ನು ಶೀಘ್ರದಲ್ಲೇ ಜೈಲಿಗೆ ಅಟ್ಟಲಾಗುವುದು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶುಕ್ರವಾರ ಭರವಸೆ ನೀಡಿದ್ದಾರೆ.

ಮೂಸೆವಾಲಾ ಹತ್ಯೆ ಪ್ರಕರಣದ ತನಿಖೆ ಬಗ್ಗೆ ಮಾಹಿತಿ ನೀಡಿರುವ ಮಾನ್, ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದ್ದು, ಈ ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ಬಂಧಿಸುವ ದಿನ ಹತ್ತಿರದಲ್ಲಿದೆ ಎಂದು ಹೇಳಿದ್ದಾರೆ.

ಮೂಸೆವಾಲಾ ಹುಟ್ಟೂರಿಗೆ ಭೇಟಿ ನೀಡಿದ ಭಗವಂತ್ ಮಾನ್, ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಂತೈಸಿದರು.

ಮೂಸೆವಾಲಾ ಅವರನ್ನು ಬಹುಮುಖ ಪ್ರತಿಭೆ ಎಂದು ಬಣ್ಣಿಸಿರುವ ಮುಖ್ಯಮಂತ್ರಿ, ಪಂಜಾಬ್ ಗಾಯಕನ ದುರಂತ ಸಾವಿನಿಂದ ಸಂಗೀತ ಕ್ಷೇತ್ರ ಹಾಗೂ ಲಕ್ಷಾಂತರ ಅಭಿಮಾನಿಗಳಿಗೆ ಅಪಾರ ನಷ್ಟ ಉಂಟಾಗಿದೆ ಎಂದು ಹೇಳಿದರು.

ಮೇ 29ರಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ದುಷ್ಕರ್ಮಿಗಳು ಮೂಸೆವಾಲಾ ಅವರನ್ನು ಗುಂಡಿಕ್ಕಿ ಹತ್ಯೆಗೈದಿದ್ದರು.

ಮೂಸೆವಾಲಾಗೆ ಒದಗಿಸಿದ್ದ ಪೊಲೀಸ್ ಭದ್ರತೆಯನ್ನು ವಾಪಸ್ ಪಡೆದ 24 ತಾಸಿನೊಳಗೆ ಹತ್ಯೆಗೀಡಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.