ADVERTISEMENT

ಗಾಯಕ ಸಿಧು ಮೂಸೆವಾಲಾ ಹತ್ಯೆ: ಆರನೇ ಶೂಟರ್‌ ಬಂಧನ

ಪಿಟಿಐ
Published 10 ಸೆಪ್ಟೆಂಬರ್ 2022, 13:52 IST
Last Updated 10 ಸೆಪ್ಟೆಂಬರ್ 2022, 13:52 IST
ಸಿಧು ಮೂಸೆವಾಲಾ
ಸಿಧು ಮೂಸೆವಾಲಾ   

ಚಂಡೀಗಡ: ಗಾಯಕ ಸಿಧು ಮೂಸೆವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದನೆಂದು ಶಂಕಿಸಲಾದ ಆರನೇ ಮತ್ತು ಕೊನೆಯ ಶೂಟರ್‌ನನ್ನು ಬಂಧಿಸಲಾಗಿದೆ ಎಂದು ಪಂಜಾಬ್‌ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕೇಂದ್ರೀಯ ತನಿಖಾ ದಳಗಳು ಮತ್ತು ಪಂಜಾಬ್ ಪೊಲೀಸ್‌ ಇಲಾಖೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ದೀಪಕ್‌ ಅಲಿಯಾಸ್‌ ಮುಂಡಿ ಸೇರಿ ಮೂವರನ್ನು ಪಶ್ಚಿಮ ಬಂಗಾಳ–ನೇಪಾಳ ಗಡಿಯಲ್ಲಿ ಬಂಧಿಸಲಾಗಿದೆ ಎಂದು ಪಂಜಾಬ್‌ ಪೊಲೀಸ್‌ ಮಹಾ ನಿರ್ದೇಶಕ ಗೌರವ್‌ ಯಾದವ್‌ ತಿಳಿಸಿದ್ದಾರೆ.

ಇದಕ್ಕೂ ಮುನ್ನ ದೆಹಲಿ ಪೊಲೀಸರು ಮೂವರು ಶೂಟರ್‌ಗಳನ್ನು ಬಂಧಿಸಿದ್ದರು, ಪಂಜಾಬ್‌ ಪೊಲೀಸರು ಇನ್ನಿಬ್ಬರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದರು.

ADVERTISEMENT

ಪಂಜಾಬ್‌ನ ಮಾನ್ಸ ಜಿಲ್ಲೆಯಲ್ಲಿ ಮೇ 29ರಂದು ಮೂಸೆವಾಲಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.