ADVERTISEMENT

ಮೊರ್ಬಿ ಸೇತುವೆ ದುರಂತದ ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರ: ಸರ್ಕಾರದ ಅಫಿಡವಿಟ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಡಿಸೆಂಬರ್ 2022, 13:57 IST
Last Updated 12 ಡಿಸೆಂಬರ್ 2022, 13:57 IST
   

ಅಹಮದಾಬಾದ್‌: ಮೊರ್ಬಿ ಸೇತುವೆ ದುರಂತದ ಸಂತ್ರಸ್ತರ ಕುಟುಂಬಗಳಿಗೆ ಹೆಚ್ಚುವರಿ ಪರಿಹಾರವನ್ನು ನೀಡಲಾಗುವುದು ಎಂದು ಗುಜರಾತ್ ಸರ್ಕಾರ ಮತ್ತು ಮೊರ್ಬಿ ನಗರ ಪಾಲಿಕೆ ಸೋಮವಾರ ಹೇಳಿವೆ.

ಮೃತರ ಕುಟುಂಬದ ಸದಸ್ಯರಿಗೆ ಒಟ್ಟು ₹10 ಲಕ್ಷ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ 1 ಲಕ್ಷ ನೀಡಲಾಗುವುದು ಎಂದು ಗುಜರಾತ್‌ ಹೈಕೋರ್ಟ್‌ಗೆ ಸಲ್ಲಿಸಲಾಗಿರುವ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಕುಟುಂಬಗಳಿಗೆ ನೀಡಿದ ಪರಿಹಾರ ಮೊತ್ತದ ಬಗ್ಗೆ ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತೀವ್ರವಾಗಿ ಟೀಕಿಸಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಹೆಚ್ಚುವರಿ ಪರಿಹಾರ ನೀಡುವುದಾಗಿ ತಿಳಿಸಿದೆ.

ADVERTISEMENT

ರಾಜ್ಯ ಸರ್ಕಾರವು ಈ ಹಿಂದೆ ಮೃತರ ಕುಟುಂಬಗಳಿಗೆ ತಲಾ ₹4 ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ ತಲಾ ₹50 ಸಾವಿರ ನೆರವು ಪ್ರಕಟಿಸಿತ್ತು.

ಮೊರ್ಬಿಯಲ್ಲಿ ಸೇತುವೆ ಕುಸಿತ ದುರಂತದಲ್ಲಿ 135 ಮಂದಿ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.