ADVERTISEMENT

ಮಹಾರಾಷ್ಟ್ರದಲ್ಲಿ 114 ಪೊಲೀಸರಿಗೆ ಕೋವಿಡ್-19,ಸೋಂಕಿತರ ಸಂಖ್ಯೆ 2,325ಕ್ಕೆ ಏರಿಕೆ

ಏಜೆನ್ಸೀಸ್
Published 30 ಮೇ 2020, 13:53 IST
Last Updated 30 ಮೇ 2020, 13:53 IST
ಕೊರೊನಾ ವೈರಸ್‌ ಸೋಂಕಿನಿಂದ ರಕ್ಷಣೆಗೆ ಮಾಸ್ಕ್‌ ಬಳಕೆ– ಸಾಂದರ್ಭಿಕ ಚಿತ್ರ
ಕೊರೊನಾ ವೈರಸ್‌ ಸೋಂಕಿನಿಂದ ರಕ್ಷಣೆಗೆ ಮಾಸ್ಕ್‌ ಬಳಕೆ– ಸಾಂದರ್ಭಿಕ ಚಿತ್ರ   

ಮುಂಬೈ: ಕೋವಿಡ್-19ನಿಂದಾಗಿ ಹೆಚ್ಚಿನ ಹೊಡೆತಕ್ಕೆ ಸಿಲುಕಿರುವ ಮಹಾರಾಷ್ಟ್ರದಲ್ಲಿಕಳೆದ 24 ಗಂಟೆಗಳಲ್ಲಿ 114 ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ರಾಜ್ಯದಲ್ಲಿ ಒಟ್ಟಾರೆ 2,325 ಮಂದಿ ಪೊಲೀಸರಿಗೆ ಸೋಂಕು ತಗುಲಿದ್ದು, ಇದುವರೆಗೂ 26 ಜನರು ಸೋಂಕಿಗೆ ಮೃತಪಟ್ಟಿದ್ದಾರೆ. ಹೊಸದಾಗಿ 114 ಪೊಲೀಸರಲ್ಲಿ ಸೋಂಕು ದೃಢಪಟ್ಟಿದ್ದು,ಓರ್ವ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದಾರೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ ರಾಜ್ಯದಲ್ಲಿ 33,133 ಸಕ್ರಿಯ ಪ್ರಕರಣಗಳಿದ್ದು,2,098 ಜನರು ಮೃತಪಟ್ಟಿದ್ದಾರೆ.

ದೇಶದಲ್ಲಿ 1,73,763 ಮಂದಿಗೆ ಕೋವಿಡ್-19 ಪತ್ತೆಯಾಗಿದ್ದು, ಇದುವರೆಗೂ 4,971 ಜನರು ಸಾವಿಗೀಡಾಗಿದ್ದಾರೆ. ಸದ್ಯ 86,422 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.