
ನವದೆಹಲಿ: ಸಂಘಟಿತ ಅಕ್ರಮ ಹೂಡಿಕೆಗೆ ಪ್ರೇರಣೆ ನೀಡುತ್ತಿದ್ದ ಹಾಗೂ ಅರೆಕಾಲಿಕ ನೌಕರಿ ನೀಡುವುದಾಗಿ ಆಮಿಷವೊಡ್ಡಿ ವಂಚಿಸಿರುವ ಆರೋಪದಲ್ಲಿ 100ಕ್ಕೂ ಹೆಚ್ಚು ವೆಬ್‌ಸೈಟ್‌ಗಳನ್ನು ನಿರ್ಬಂಧಿಸಲಾಗಿದೆ.
ಕೇಂದ್ರ ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ ಈ ವೆಬ್‌ಸೈಟ್‌ಗಳ ಮೇಲೆ ನಿರ್ಬಂಧ ಹೇರಲಾಗಿದೆ. ಈ ವೆಬ್‌ಸೈಟ್‌ಗಳನ್ನು ವಿದೇಶಗಳಿಂದ ನಿರ್ವಹಣೆ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಉದ್ಯೋಗ ವಂಚನೆ ಮತ್ತು ಸಂಘಟಿತ ಅಕ್ರಮ ಹೂಡಿಕೆಗೆ ಪ್ರೋತ್ಸಾಹ ನೀಡುತ್ತಿದ್ದ 100ಕ್ಕೂ ಹೆಚ್ಚು ವೆಬ್‌ಸೈಟ್‌ಗಳನ್ನು ರಾಷ್ಟ್ರೀಯ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯೂನಿಟ್ (ಎನ್‌ಸಿಟಿಎಯು) ಈಚೆಗೆ ಪತ್ತೆಹಚ್ಚಿತ್ತು. ಇದರ ಆಧಾರದಲ್ಲಿ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಈ ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿದೆ.
ಡಿಜಿಟಲ್ ಜಾಹೀರಾತು ಮತ್ತು ಚಾಟ್ ಮೆಸೆಂಜರ್‌ಗಳನ್ನು ಬಳಸಿ ಈ ವೆಬ್‌ಸೈಟ್‌ಗಳ ಮೂಲಕ ಆರ್ಥಿಕ ಅಪರಾಧ ಮತ್ತು ಉದ್ಯೋಗ ವಂಚನೆ ನಡೆಸಲಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.