ADVERTISEMENT

ದೆಹಲಿ: ಕೊರೊನಾ ಸೋಂಕಿಗೆ ಒಂದೇ ದಿನ 306 ಜನ ಬಲಿ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2021, 4:15 IST
Last Updated 23 ಏಪ್ರಿಲ್ 2021, 4:15 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಗುರುವಾರ ಸಂಜೆ‌ ಕೊನೆಗೊಂಡ 24 ಗಂಟೆಗಳ‌ ಅವಧಿಯಲ್ಲಿ 306 ಜನ ಸಾವಿಗೀಡಾಗಿದ್ದಾರೆ.

ಇದೇ ವೇಳೆ ಒಟ್ಟು 26,169 ಜನ ಮಾರಣಾಂತಿಕ ಸೋಂಕಿಗೆ ಒಳಗಾಗಿದ್ದಾರೆ. ಪರೀಕ್ಷೆಗೆ ಒಳಪಟ್ಟಿರುವ ಒಟ್ಟು 72,208 ಜನರ ಪೈಕಿ ಶೇ 36.24ರಷ್ಟು ಜನರಲ್ಲಿ ಸೊಂಕು ಪತ್ತೆಯಾಗಿದೆ. ಇದುವರೆಗೆ ಸೋಂಕು ಕಾಣಿಸಿಕೊಂಡ ಶೇಕಡಾವಾರು ಪ್ರಮಾಣದಲ್ಲಿ ಇದು ಅತಿ ಹೆಚ್ಚು ಎಂದು ಆರೋಗ್ಯ ಇಲಾಖೆ‌ ಹೇಳಿದೆ.

ದೆಹಲಿಯಲ್ಲಿ ಕಳೆದ ಮಂಗಳವಾರದಿಂದ ಒಂದು ವಾರದ ಅವಧಿಯ ಲಾಕ್‌ಡೌನ್ ಜಾರಿಯಲ್ಲಿದ್ದು, ಜನ ಮನೆ‌ ಬಿಟ್ಟು ಹೊರಗೆ ಬರದಂತೆ ತಡೆಯಲು ಪೊಲೀಸ್ ಹಾಗೂ ಕೇಂದ್ರೀಯ ಪಡೆಗಳ‌ ಸಿಬ್ಬಂದಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಆದರೂ ಕೊರೊನಾ ಸೋಂಕು ಹರಡುತ್ತಿರುವುದು ನಿಯಂತ್ರಣಕ್ಕೆ ಬರುತ್ತಿಲ್ಲ.

ADVERTISEMENT

ಈ ನಡುವೆ 19,609 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗಳಿಗೆ ತೆರಳಿದ್ದು, ಇನ್ನೂ 91,618 ಸಕ್ರಿಯ ಪ್ರಕರಣಗಳಿವೆ.

3 ಲಕ್ಷ ದಾಟಿದ ಸೋಂಕಿತರ ಸಂಖ್ಯೆ:

ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 3,32,051 ಜನ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.

ಈ ಪೈಕಿ ಚಿಕಿತ್ಸೆಗೆ ಸ್ಪಂದಿಸದೆ 2,365 ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ಖಚಿತಪಡಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.