ADVERTISEMENT

ಸುಪ್ರೀಂ ಕೋರ್ಟ್‌: 69 ಸಾವಿರಕ್ಕೂ ಅಧಿಕ ಪ್ರಕರಣಗಳು ಬಾಕಿ

ಪಿಟಿಐ
Published 9 ಫೆಬ್ರುವರಿ 2023, 15:21 IST
Last Updated 9 ಫೆಬ್ರುವರಿ 2023, 15:21 IST
ಕಿರಣ್ ರಿಜಿಜು
ಕಿರಣ್ ರಿಜಿಜು   

ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ 69,511 ಹಾಗೂ ದೇಶದಲ್ಲಿನ 25 ಹೈಕೋರ್ಟ್‌ಗಳಲ್ಲಿ 59 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇವೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಅವರು ಗುರುವಾರ ರಾಜ್ಯಸಭೆಯಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಫೆಬ್ರುವರಿ 1ಕ್ಕೆ ಅನ್ವಯವಾಗುವಂತೆ ಸುಪ್ರೀಂ ಕೋರ್ಟ್‌ನಲ್ಲಿ 69,511 ಮೊಕದ್ದಮೆಗಳು ವಿಚಾರಣೆಗೆ ಬಾಕಿ ಇವೆ ಎಂದು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿನ ಮಾಹಿತಿ ಆಧರಿಸಿ ಅವರು ಈ ವಿಷಯ ತಿಳಿಸಿದರು.

ರಾಷ್ಟ್ರೀಯ ನ್ಯಾಯಾಂಗ ದತ್ತಾಂಶ ಗ್ರಿಡ್‌ನಲ್ಲಿ (ಎನ್‌ಜೆಡಿಜಿ) ಲಭ್ಯವಾಗಿರುವ ಮಾಹಿತಿ ಪ್ರಕಾರ, 59,87,477 ಪ್ರಕರಣಗಳು ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ ಬಾಕಿ ಇವೆ. ಇವುಗಳಲ್ಲಿ ಅಲಹಾಬಾದ್‌ ಹೈಕೋರ್ಟ್‌ ಒಂದರಲ್ಲೇ ಸುಮಾರು 10.30 ಲಕ್ಷ ಪ್ರಕರಣಗಳು ಬಾಕಿ ಇವೆ. ಸಿಕ್ಕಿಂ ಹೈಕೋರ್ಟ್‌ನಲ್ಲಿ 171 ಪ್ರಕರಣಗಳು ಬಾಕಿ ಇದ್ದು, ಅತ್ಯಂತ ಕಡಿಮೆ ಪ್ರಕರಣಗಳು ಬಾಕಿ ಇರುವ ಹೈಕೋರ್ಟ್‌ ಇದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ತ್ವರಿತವಾಗಿ ಪ್ರಕರಣಗಳ ವಿಚಾರಣೆ ನಡೆಸಲು ಅನುಕೂಲವಾಗುವಂಥ ಹಲವು ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ ಎಂದು ರಿಜಿಜು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.