ADVERTISEMENT

72.77 ಕೋಟಿಗೂ ಹೆಚ್ಚು ಲಸಿಕೆ ಡೋಸ್‌ಗಳನ್ನು ರಾಜ್ಯಗಳಿಗೆ ನೀಡಲಾಗಿದೆ: ಕೇಂದ್ರ

ಪಿಟಿಐ
Published 14 ಸೆಪ್ಟೆಂಬರ್ 2021, 11:06 IST
Last Updated 14 ಸೆಪ್ಟೆಂಬರ್ 2021, 11:06 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: 72.77 ಕೋಟಿಗೂ ಹೆಚ್ಚು ಕೋವಿಡ್-19 ಲಸಿಕೆ ಡೋಸನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರವು ಉಚಿತವಾಗಿ ಮತ್ತು ನೇರ ರಾಜ್ಯ ಖರೀದಿ ವರ್ಗದ ಮೂಲಕ ಒದಗಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.

1.6 ಕೋಟಿಗಿಂತ (1,60,75,000) ಹೆಚ್ಚು ಲಸಿಕೆ ಡೋಸ್‌ಗಳು ಇನ್ನೂ ಪೂರೈಕೆ ಹಂತದಲ್ಲಿವೆ. 4.49 ಕೋಟಿ (4,49,03,025) ಗಿಂತ ಹೆಚ್ಚು ಉಳಿಕೆ ಮತ್ತು ಬಳಕೆಯಾಗದ ಕೋವಿಡ್-19 ಲಸಿಕೆ ಡೋಸ್‌ಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ ಲಭ್ಯವಿವೆ ಎಂದು ಸಚಿವಾಲಯ ತಿಳಿಸಿದೆ.

ಕೇಂದ್ರ ಸರ್ಕಾರವು ಲಸಿಕೆ ಅಭಿಯಾನದ ವೇಗವನ್ನು ಹೆಚ್ಚಿಸಲು ಮತ್ತು ದೇಶದಾದ್ಯಂತ ಕೋವಿಡ್-19 ಲಸಿಕೆಯ ವ್ಯಾಪ್ತಿಯನ್ನು ವಿಸ್ತರಿಸಲು ಬದ್ಧವಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೆಚ್ಚಿನ ಲಸಿಕೆ ಲಭ್ಯವಾಗುವಂತೆ ಮತ್ತು ಲಸಿಕೆ ಪೂರೈಕೆ ಸರಪಳಿಯನ್ನು ಸುವ್ಯವಸ್ಥಿತಗೊಳಿಸುವ ಮೂಲಕ ಲಸಿಕೆ ಹಾಕುವಿಕೆಯನ್ನು ಹೆಚ್ಚಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ADVERTISEMENT

ಕೋವಿಡ್-19 ಲಸಿಕೆ ಹಾಕುವಿಕೆಯ ಸಾರ್ವತ್ರಿಕರಣದಲ್ಲಿ ಕೇಂದ್ರ ಸರ್ಕಾರವು ದೇಶದಲ್ಲಿ ಲಸಿಕೆ ತಯಾರಕರು ಉತ್ಪಾದಿಸುವ ಲಸಿಕೆಗಳಲ್ಲಿ 75 ಪ್ರತಿಶತವನ್ನು ಖರೀದಿಸಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಪೂರೈಸುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.