ADVERTISEMENT

ಅರ್ಧಕ್ಕಿಂತ ಹೆಚ್ಚು ರಾಜ್ಯಗಳ ಮತದಾರರು ದಾಖಲೆ ಸಲ್ಲಿಸಬೇಕಾಗಲಿಕ್ಕಿಲ್ಲ: EC

ದೇಶದಾದ್ಯಂತ ಎಸ್‌ಐಆರ್‌

ಪಿಟಿಐ
Published 17 ಸೆಪ್ಟೆಂಬರ್ 2025, 15:38 IST
Last Updated 17 ಸೆಪ್ಟೆಂಬರ್ 2025, 15:38 IST
<div class="paragraphs"><p>ಚುನಾವಣಾ ಆಯೋಗ </p></div>

ಚುನಾವಣಾ ಆಯೋಗ

   

ನವದೆಹಲಿ: ದೇಶದಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುಂದಾಗಿರುವ ಚುನಾವಣಾ ಆಯೋಗವು, ಪರಿಷ್ಕರಣೆ ವೇಳೆ ರಾಜ್ಯಗಳಲ್ಲಿನ ಅರ್ಧಕ್ಕಿಂತ ಹೆಚ್ಚು ಮತದಾರರು ಯಾವುದೇ ದಾಖಲೆಯನ್ನು ನೀಡಬೇಕಾಗಿಲ್ಲ ಎಂದು ಬುಧವಾರ ಹೇಳಿದೆ.

ಈ ಹಿಂದೆ, ವಿವಿಧ ರಾಜ್ಯಗಳಲ್ಲಿ ನಡೆದ ಎಸ್‌ಐಆರ್‌ ಬಳಿಕ ಸಿದ್ಧಪಡಿಸಲಾಗಿರುವ ಮತದಾರರ ಪಟ್ಟಿಯಲ್ಲಿರುವ ವಿವರಗಳನ್ನು ಪರಿಗಣಿಸುತ್ತಿರುವುದೇ ಇದಕ್ಕೆ ಕಾರಣ ಎಂದು ಆಯೋಗ ಹೇಳಿದೆ.

ADVERTISEMENT

ಬಹುತೇಕ ರಾಜ್ಯಗಳಲ್ಲಿ 2002 ಮತ್ತು 2004ರ ನಡುವೆ ಎಸ್‌ಐಆರ್‌ ನಡೆಸಲಾಗಿದೆ. ಮುಂದಿನ ಎಸ್‌ಐಆರ್‌ ವೇಳೆ, 2002 ಹಾಗೂ 2004ರ ನಡುವಿನ ಸಂಬಂಧಿಸಿದ ವರ್ಷವನ್ನೇ ಆಧಾರವನ್ನಾಗಿ ಪರಿಗಣಿಸಲಾಗುವುದು ಎಂದೂ ಆಯೋಗ ಸ್ಪಷ್ಟಪಡಿಸಿದೆ. 

ಈ ಹಿಂದಿನ ಎಸ್‌ಐಆರ್‌ ಬಳಿಕ ಪ್ರಕಟಿಸಲಾಗಿರುವ ಮತದಾರರ ಪಟ್ಟಿಯನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಎಲ್ಲ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ (ಸಿಇಒ) ಈಗಾಗಲೇ ಸೂಚನೆ ನೀಡಲಾಗಿದೆ. ಕೆಲ ರಾಜ್ಯಗಳ ಸಿಇಒಗಳು ಇಂತಹ ಮತದಾರರ ಪಟ್ಟಿಯನ್ನು ಈಗಾಗಲೇ ಕಚೇರಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.