ADVERTISEMENT

ಚಿನ್ನ ಕಳ್ಳ ಸಾಗಣೆ: ಶಿವಶಂಕರ್‌ ಬಂಧಿಸಲು ಕಸ್ಟಮ್ಸ್‌ಗೆ ಅನುಮತಿ

ಪಿಟಿಐ
Published 23 ನವೆಂಬರ್ 2020, 14:20 IST
Last Updated 23 ನವೆಂಬರ್ 2020, 14:20 IST
ಶಿವಶಂಕರ್‌
ಶಿವಶಂಕರ್‌   

ಕೊಚ್ಚಿ: ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಹಾಗೂ ಅಮಾನತುಗೊಂಡಿರುವ ಐಎಎಸ್‌ ಅಧಿಕಾರಿ ಎಂ. ಶಿವಶಂಕರ್‌ ಅವರನ್ನು ಬಂಧಿಸಲು, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯವು ಕಸ್ಟಮ್ಸ್‌ಗೆ ಸೋಮವಾರ ಅನುಮತಿ ನೀಡಿದೆ.

ರಾಜತಾಂತ್ರಿಕ ಮಾರ್ಗದ ಮೂಲಕ ಚಿನ್ನ ಕಳ್ಳಸಾಗಣೆ ನಡೆಸಿರುವ ಪ್ರಕರಣದಲ್ಲಿ ಶಿವಶಂಕರ್‌ ನೇರವಾಗಿ ಭಾಗಿಯಾಗಿರುವ ಬಗ್ಗೆ ಸಾಕ್ಷ್ಯಗಳು ಲಭಿಸಿವೆ. ಈ ಕಾರಣಕ್ಕೆ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸುವ ಅಗತ್ಯ ಇದೆ ಎಂದು ಕಸ್ಟಮ್ಸ್‌ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಮಾಜಿ ಮುಖ್ಯಕಾರ್ಯದರ್ಶಿ ಶಿವಶಂಕರ್‌ ಅವರನ್ನು ಜಾರಿ ನಿರ್ದೇನಾಲಯದ ಅಧಿಕಾರಿಗಳು ಇದೇ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಬಂಧಿಸಿದ್ದು, ಈಗ ಅವರು ಜೈಲಿನಲ್ಲಿದ್ದಾರೆ.

ADVERTISEMENT

ಪ್ರಮುಖ ಆರೋಪಿಗಳಾದ ಸ್ವಪ್ನಾ ಸುರೇಶ್‌, ಸರಿತ್‌ ಪಿ.ಎಸ್‌. ಮತ್ತು ಸಂದೀಪ್‌ ನಾಯರ್‌ ಸೇರಿದಂತೆ 15 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಅರ್ಜಿಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.