ADVERTISEMENT

ರಾವತ್ ನಿವಾಸಕ್ಕೆ ಪಾರ್ಥಿವ ಶರೀರ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಅಂತಿಮ ನಮನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಡಿಸೆಂಬರ್ 2021, 5:30 IST
Last Updated 10 ಡಿಸೆಂಬರ್ 2021, 5:30 IST
ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ಹಾಗೂ ಬ್ರಿಗೇಡಿಯರ್‌ ಲಖ್ವಿಂದರ್ ಸಿಂಗ್‌ ಲಿದ್ದರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಂತಿಮ ನಮನ ಸಲ್ಲಿಸಿದರು – ಪಿಟಿಐ ಚಿತ್ರ
ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ಹಾಗೂ ಬ್ರಿಗೇಡಿಯರ್‌ ಲಖ್ವಿಂದರ್ ಸಿಂಗ್‌ ಲಿದ್ದರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಂತಿಮ ನಮನ ಸಲ್ಲಿಸಿದರು – ಪಿಟಿಐ ಚಿತ್ರ   

ನವದೆಹಲಿ: ತಮಿಳುನಾಡಿನ ಕೂನೂರಿನಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ, ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಪಾರ್ಥಿವ ಶರೀರಗಳನ್ನು ದೆಹಲಿಯ ಅವರ ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ ತರಲಾಯಿತು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಬಿಪಿನ್ ರಾವತ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಮಧ್ಯಾಹ್ನ 2 ಗಂಟೆಯ ವರೆಗೆ ಅಂತಿಮ ದರ್ಶನಕ್ಕೆ ಅನುವುಮಾಡಿಕೊಡಲಾಗಿದೆ.

ಇದಕ್ಕೂ ಮುನ್ನ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್, ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಬ್ರಿಗೇಡಿಯರ್‌ ಲಖ್ವಿಂದರ್ ಸಿಂಗ್‌ ಲಿದ್ದರ್‌ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು. ಲಿದ್ದರ್‌ ಅವರ ಪತ್ನಿ ಹಾಗೂ ಪುತ್ರಿ ಕೂಡ ಅಂತಿಮ ನಮನ ಸಲ್ಲಿಸಿದರು. ಬಳಿಕ ಸಕಲ ಸೇನಾ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿತು.

ADVERTISEMENT

ತಮಿಳುನಾಡಿನ ಕೂನೂರಿನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ್ದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್, ಮಧುಲಿಕಾ, ಲಿದ್ದರ್ ಸೇರಿ 13 ಮಂದಿ ಮೃತಪಟ್ಟಿದ್ದರು. ಈವರೆಗೆ ನಾಲ್ವರ ಗುರುತು ಮಾತ್ರ ಪತ್ತೆಯಾಗಿದ್ದು, ಉಳಿದವರ ಗುರುತು ಪತ್ತೆಗಾಗಿ ಡಿಎನ್‌ಎ ಪರೀಕ್ಷೆ ಹಾಗೂ ಹತ್ತಿರದ ಸಂಬಂಧಿಕರಿಂದ ಪಡೆದ ರಕ್ತದ ಮಾದರಿ ಜೊತೆ ಹೋಲಿಸಿ ಪರೀಕ್ಷೆ ನಡೆಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.