ADVERTISEMENT

ಕಾಶ್ಮೀರದಲ್ಲಿ ಶೂನ್ಯಕ್ಕಿಂತ ಕೆಳಗೆ ಇಳಿದ ತಾಪಮಾನ

ಪಿಟಿಐ
Published 23 ನವೆಂಬರ್ 2022, 12:33 IST
Last Updated 23 ನವೆಂಬರ್ 2022, 12:33 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀನಗರ: ಕಾಶ್ಮೀರದಲ್ಲಿ ಚಳಿಯ ವಾತಾವರಣ ಹೆಚ್ಚುತ್ತಿದ್ದು,ಬಹುತೇಕ ಪ್ರದೇಶಗಳಲ್ಲಿ ರಾತ್ರಿ ತಾಪಮಾನವು ಶೂನ್ಯಕ್ಕಿಂತಲೂ ಕಡಿಮೆಯಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

‘ದಕ್ಷಿಣ ಕಾಶ್ಮೀರದ ಕೋಕರನಾಗ್‌ ಹೊರತುಪಡಿಸಿ ಇತರೆಡೆಗಳಲ್ಲಿ ಮಂಗಳವಾರ ರಾತ್ರಿ ತಾಪಮಾನವು ಶೂನ್ಯಕ್ಕಿಂತ ಕಡಿಮೆಯಿದೆ’ಎಂದೂ ಅಧಿಕಾರಿಗಳು ಹೇಳಿದ್ದಾರೆ.

ಗುಲ್ಮಾರ್ಗ್‌ದಲ್ಲಿ –3.8, ಪಹಲಗಾಮ್‌ನಲ್ಲಿ –4.8, ಕಾಜಿಗುಂಡ್‌ನಲ್ಲಿ –1.6, ಕುಪ್ವಾರಾದಲ್ಲಿ –2.9 ಡಿಗ್ರಿ ಸೆಲ್ಸಿಯಸ್‌ಗಳಷ್ಟು ತಾಪಮಾನ ದಾಖಲಾಗಿದೆ.

ADVERTISEMENT

ಲೇಹ್‌ನಲ್ಲಿ –9.6 ಹಾಗೂ ದ್ರಾಸ್‌ನಲ್ಲಿ –13.5 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.