ADVERTISEMENT

ಸಿಬಿಐ ಅಧಿಕಾರಿಗಳೇ ಸಿಸೋಡಿಯಾ ಬಂಧನದ ವಿರುದ್ಧವಾಗಿದ್ದಾರೆ: ಕೇಜ್ರಿವಾಲ್‌

ಐಎಎನ್ಎಸ್
Published 27 ಫೆಬ್ರುವರಿ 2023, 9:40 IST
Last Updated 27 ಫೆಬ್ರುವರಿ 2023, 9:40 IST
   

ನವದೆಹಲಿ: ಕೇಂದ್ರ ತನಿಖಾ ಸಂಸ್ಥೆಯ(ಸಿಬಿಐ) ಹಲವು ಅಧಿಕಾರಿಗಳು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿರುವ ಕ್ರಮಕ್ಕೆ ವಿರುದ್ಧವಾಗಿದ್ದಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಕೇಜ್ರಿವಾಲ್‌, ಹೆಚ್ಚಿನ ಸಿಬಿಐ ಅಧಿಕಾರಿಗಳು ಮನೀಶ್ ಬಂಧನವನ್ನು ವಿರೋಧಿಸಿದ್ದಾರೆ. ಅವರೆಲ್ಲರಿಗೂ ಸಿಸೋಡಿಯಾ ಮೇಲೆ ಅಪಾರ ಗೌರವವಿದೆ ಮತ್ತು ಅವರ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂಬುದು ತಿಳಿದಿದೆ. ಆದರೆ ಅವರನ್ನು ಬಂಧಿಸಲು ರಾಜಕೀಯ ಒತ್ತಡ ಹೆಚ್ಚಿದ್ದು, ಅಧಿಕಾರಿಗಳು ಅದನ್ನು ಪಾಲಿಸಿದ್ದಾರೆ ಎಂದಿದ್ದಾರೆ.

ಏತನ್ಮಧ್ಯೆ, ಸಿಸೋಡಿಯಾ ಬಂಧನವನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ (ಎಎಪಿ) ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ಆರಂಭಿಸಿದೆ. ದೆಹಲಿ, ಬೆಂಗಳೂರು, ಚಂಡೀಗಢ, ಭೋಪಾಲ್ ಮತ್ತು ಇತರ ಹಲವಾರು ನಗರಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.

ADVERTISEMENT

ಎಎಪಿ ಸೋಮವಾರ ಕರಾಳ ದಿನ ಆಚರಿಸಲಿದೆ ಎಂದು ದೆಹಲಿ ಸಚಿವ ಗೋಪಾಲ್ ರೈ ಹೇಳಿದ್ದಾರೆ.

ದೆಹಲಿ ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಿಬಿಐ ಪ್ರಧಾನ ಕಚೇರಿ ಮತ್ತು ಎಎಪಿ ಕಚೇರಿ ಸೇರಿದಂತೆ ರಾಷ್ಟ್ರ ರಾಜಧಾನಿಯ ಹಲವು ಸ್ಥಳಗಳಲ್ಲಿ ಬಿಗಿಭದ್ರತೆ ಒದಗಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.