ADVERTISEMENT

ಕಾಶ್ಮೀರ ವಿಚಾರದಲ್ಲಿ ರಾಹುಲ್ ಗಾಂಧಿ ಬೇಜವಾಬ್ದಾರಿ ರಾಜಕೀಯ: ಬಿಜೆಪಿ ಟೀಕೆ

ಏಜೆನ್ಸೀಸ್
Published 28 ಆಗಸ್ಟ್ 2019, 11:46 IST
Last Updated 28 ಆಗಸ್ಟ್ 2019, 11:46 IST
ಪ್ರಕಾಶ್ ಜಾವಡೇಕರ್ 
ಪ್ರಕಾಶ್ ಜಾವಡೇಕರ್    

ನವದೆಹಲಿ:ಕಾಶ್ಮೀರವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ‘ಅತ್ಯಂತ ಬೇಜವಾಬ್ದಾರಿ’ ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

ಜಮ್ಮು–ಕಾಶ್ಮೀರಕ್ಕೆ ಸಂಬಂಧಿಸಿ ಬುಧವಾರ ಬೆಳಿಗ್ಗೆ ಟ್ವೀಟ್‌ ಮಾಡುವ ಮೂಲಕ ರಾಹುಲ್ ಗಾಂಧಿ‘ಯು–ಟರ್ನ್‌’ ತೆಗೆದುಕೊಂಡಿದ್ದಾರೆ ಎಂಬುದನ್ನು ಬಿಜೆಪಿ ಅಲ್ಲಗಳೆದಿದೆ.

ಕಾಶ್ಮೀರ ಕಣಿವೆಗೆ ಸಂಬಂಧಿಸಿ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುವ ಮೂಲಕ ದೇಶದ ಜನತೆಯನ್ನು ರಾಹುಲ್ ಗಾಂಧಿ ಅವಮಾನಿಸಿದ್ದಾರೆ.ಕಾಶ್ಮೀರ ಕಣಿವೆಯಲ್ಲಿನ ಹಿಂಸಾಚಾರ ಮತ್ತು ಸಾವುಗಳಿಗೆ ಸಂಬಂಧಿಸಿದ ಅವರ ಹೇಳಿಕೆಯನ್ನು ಪಾಕಿಸ್ತಾನ ಕೂಡ ವಿಶ್ವಸಂಸ್ಥೆಯ ಅರ್ಜಿಯಲ್ಲಿ ಬಳಸಿಕೊಂಡಿದೆ ಎಂದು ಬಿಜೆಪಿ ವಕ್ತಾರ, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ಹೇಳಿದ್ದಾರೆ.

‘ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವುಜಮ್ಮು–ಕಾಶ್ಮೀರಕ್ಕೆ ಸಂಬಂಧಿಸಿ ನೀಡಿದ್ದ ಹೇಳಿಕೆಗಳಿಗೆ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಯಿತು. ಬಳಿಕ ಅವರು ಹೇಳಿಕೆಗಳನ್ನು ವಾಪಸ್ ತೆಗೆದುಕೊಳ್ಳಬೇಕಾಯಿತು’ ಎಂದು ಅವರು ಹೇಳಿದ್ದಾರೆ.

‘ಕಾಶ್ಮೀರದಲ್ಲಿ ಹಿಂಸಾಚಾರ ನಡೆಯುತ್ತಿರುವುದನ್ನು ರಾಹುಲ್ ಗಾಂಧಿ ಅವರಂತಹ ಮುಖ್ಯವಾಹಿನಿಯ ನಾಯಕರೇ ಒಪ್ಪಿಕೊಂಡಿದ್ದಾರೆ’ ಎಂಬುದಾಗಿ ವಿಶ್ವಸಂಸ್ಥೆಗೆ ಸಲ್ಲಿಸಿರುವ ಅರ್ಜಿಯಲ್ಲಿ ಪಾಕಿಸ್ತಾನ ಉಲ್ಲೇಖಿಸಿದೆ ಎಂದು ಜಾವಡೇಕರ್ ಹೇಳಿದ್ದಾರೆ.

ಕಾಶ್ಮೀರ ವಿಷಯಕ್ಕೆ ಸಂಬಂಧಿಸಿಬುಧವಾರ ಬೆಳಿಗ್ಗೆ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ,‘ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ವಿಷಯದಲ್ಲಿ ವಿಶ್ವದಾದ್ಯಂತ ಕುಖ್ಯಾತಿ ಗಳಿಸಿರುವ ಪಾಕಿಸ್ತಾನವೇ ಜಮ್ಮು–ಕಾಶ್ಮೀರದಲ್ಲಿನ ಹಿಂಸಾಚಾರಕ್ಕೆ ಪ್ರಚೋದನೆ ಮತ್ತು ಕುಮ್ಮಕ್ಕು ನೀಡುತ್ತಿದೆ’ ಎಂದಿದ್ದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.