ADVERTISEMENT

ಮೋಸ್ಟ್ ವಾಂಟೆಡ್ ಎಲ್‌ಇಟಿ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಜುಲ್ಫಿಕರ್ ಮಜಿದ್
Published 3 ಜನವರಿ 2022, 11:38 IST
Last Updated 3 ಜನವರಿ 2022, 11:38 IST
ಪಿಟಿಐ ಸಂಗ್ರಹ ಚಿತ್ರ
ಪಿಟಿಐ ಸಂಗ್ರಹ ಚಿತ್ರ   

ಶ್ರೀನಗರ: ಬಹಳ ಸಮಯದಿಂದ ಕಣಿವೆ ರಾಜ್ಯದಲ್ಲಿ ಅಡಗಿದ್ದ ಮತ್ತು ಮೋಸ್ಟ್ ವಾಂಟೆಡ್ ಉಗ್ರನನ್ನು ಶ್ರೀನಗರದ ಹೊರವಲಯದ ಹರ್ವಾನ್‌ನಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಸೋಮವಾರ ಹತ್ಯೆ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ತಿಳಿಸಲಾಗಿದೆ.

ಶ್ರೀನಗರದ ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರನನ್ನು ಹೊಡೆದುರುಳಿಸಲಾಗಿದೆ. ಉಗ್ರ ಸಲೀಮ್ ಪರೆಯ್ ಅನ್ನು ಹತ್ಯೆ ಮಾಡಲಾಗಿದೆ. ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದ್ದು, ಮತ್ತಷ್ಟು ಮಾಹಿತಿ ಬರಲಿದೆ ಎಂದು ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ಉಗ್ರ ಸಲೀಮ್ ಪರೆಯ್, 2017–18ರಲ್ಲಿ ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಹಜಿನ್ ಪ್ರದೇಶದಲ್ಲಿ ಕೆಲ ನಿವಾಸಿಗಳ ತಲೆ ಕಡಿದು ಭಯೋತ್ಪಾದನೆಗೆ ಕುಮ್ಮಕ್ಕು ನೀಡಿದ್ದ ಎಂದು ತಿಳಿದು ಬಂದಿದೆ. ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಿಡುಗಡೆ ಮಾಡಿದ್ದ ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಯಲ್ಲಿ ಸಲೀಮ್ ಹೆಸರಿತ್ತು.

ADVERTISEMENT

ಪೊಲೀಸ್ ದಾಖಲೆಗಳ ಪ್ರಕಾರ, ಪರೆಯ್ 2006ರಿಂದ ಭಯೋತ್ಪಾದಕ ಕೃತ್ಯಗಳಲ್ಲಿ ತೊಡಗಿದ್ದು, ದೀರ್ಘಾವಧಿಯಿಂದ ಜಮ್ಮು ಜನರನ್ನು ಕಾಡುತ್ತಿದ್ಧಾನೆ. ಎರಡು ಬಾರಿ ಬಂಧಿಸಿ ಬಿಡುಗಡೆ ಮಾಡಲಾಗಿತ್ತು. ಬಳಿಕ ಆತ 2014ರಿಂದ ಹಿಜ್ಬುಲ್ ಮುಜಾಹಿದ್ದೀನ್ ಮತ್ತು ಎಲ್‌ಇಟಿ ಜೊತೆ ಕೈಜೋಡಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.