ADVERTISEMENT

ಅಳುತ್ತಿತ್ತು ಎಂದು 15 ದಿನಗಳ ಶಿಶುವನ್ನು ಫ್ರಿಡ್ಜ್‌ನಲ್ಲಿಟ್ಟ ತಾಯಿ!

ಏಜೆನ್ಸೀಸ್
Published 11 ಸೆಪ್ಟೆಂಬರ್ 2025, 2:18 IST
Last Updated 11 ಸೆಪ್ಟೆಂಬರ್ 2025, 2:18 IST
<div class="paragraphs"><p>ಮಗು (ಪ್ರಾತಿನಿಧಿಕ ಚಿತ್ರ)</p></div>

ಮಗು (ಪ್ರಾತಿನಿಧಿಕ ಚಿತ್ರ)

   

ಮೊರಾದಾಬಾದ್: ಉತ್ತರಪ್ರದೇಶದ ಮೊರಾದಾಬಾದ್‌ನಲ್ಲಿ ಮಹಿಳೆಯೊಬ್ಬರು ತನ್ನ 15 ದಿನಗಳ ಶಿಶುವನ್ನು ಫ್ರಿಡ್ಜ್‌ನಲ್ಲಿಟ್ಟು ನಿದ್ರಿಸಿದ ಘಟನೆ ನಡೆದಿದೆ.

ವರದಿಗಳ ಪ್ರಕಾರ, ಫ್ರಿಡ್ಜ್‌ನಲ್ಲಿ ಅಳುವ ಸದ್ದು ಕೇಳಿ ಅಜ್ಜಿ ಮಗುವನ್ನು ರಕ್ಷಿಸಿದ್ದಾರೆ. ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸದ್ಯ ಮಗುವಿನ ಆರೋಗ್ಯ ಸ್ಥಿರವಾಗಿದೆ.

ADVERTISEMENT

ಈ ಬಗ್ಗೆ ಮಹಿಳೆಯನ್ನು ಪ್ರಶ್ನಿಸಿದಾಗ, ‘ಮಗು ತುಂಬಾ ಅಳುತ್ತಿತ್ತು, ಇದರಿಂದ ನನಗ ನಿದ್ದೆ ಮಾಡಲು ಸಾಧ್ಯವಾಗುತ್ತಿರಲಿಲ್ಲ, ಹೀಗಾಗಿ ಫ್ರಿಡ್ಜ್‌ನಲ್ಲಿ ಇರಿಸಿದ್ದೆ’ ಎಂದು ಹೇಳಿದ್ದಾರೆ.

ಆರಂಭದಲ್ಲಿ ಕುಟುಂಬ ಸದಸ್ಯರು ಮಹಿಳೆಗೆ ಕೆಟ್ಟ ದೃಷ್ಟಿ ತಗುಲಿದೆ ಎಂದು ಮಂತ್ರವಾದಿಯ ಬಳಿ ಕರೆದೊಯ್ದಿದ್ದರು. ಆದರೆ ಅದರಿಂದ ಯಾವ ಪ್ರಯೋಜನವೂ ಆಗಿರಲಿಲ್ಲ. ಕೊನೆಯಲ್ಲಿ ಮಹಿಳೆಯನ್ನು ಮಾನಸಿಕ ತಜ್ಞರ ಬಳಿ ಕರೆದೊಯ್ದಾಗ ಹೆರಿಗೆ ಬಳಿಕದ ಮಾನಸಿಕ ಸಮಸ್ಯೆ ಇರುವುದು ಗೊತ್ತಾಗಿದೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ತಿಳಿಸಿದೆ.

ಸದ್ಯ ಮಹಿಳೆಯನ್ನು ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.