
ಹೈದರಾಬಾದ್: ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಮಹಿಳೆಯೊಬ್ಬರು ತನ್ನ ಎರಡು ತಿಂಗಳ ಮಗುವನ್ನು ಕೊಂದಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.
ಶಿಶು ಜನನದ ನಂತರ ಮಹಿಳೆ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಆಕೆ ಹಾಗೂ ಮಗುವಿನ ಹಾರೈಕೆಗೆ ಯಾರ ಬೆಂಬಲ ಸಿಗಲಿಲ್ಲ. ಇದೇ ಕಾರಣಕ್ಕೆ ಆಕೆ ಒತ್ತಡದಲ್ಲಿದ್ದಳು ಎಂದು ಪೊಲೀಸರು ಅನುಮಾನ ವ್ಯಕ್ತಡಿಸಿದ್ದಾರೆ.
ನಿರಂತರವಾಗಿ ಅಳುತ್ತಿದ್ದ ಮಗುವನ್ನು ಸಮಾಧಾನ ಪಡಿಸಲು ಆಗಾದೆ, ಒತ್ತಡಕ್ಕೆ ಒಳಗಾಗಿ ಮಗುವನ್ನು ಕೊಂದಿದ್ದಾಳೆ ಎಂದು ಆಕೆಯ ಪತಿ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬಾಯಿಯಲ್ಲಿ ಬಟ್ಟೆ ತುರುಕಿದ ಹಾಗೂ ಸುಟ್ಟ ಗಾಯಗಳಾಗಿರುವ ಸ್ಥಿತಿಯಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಮಧ್ಯಪ್ರದೇಶ ಮೂಲದ ಈ ದಂಪತಿ, ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.