ADVERTISEMENT

ಕೇರಳ | ಭಾರಿ ಮಳೆಗೆ ಮನೆಯ ಗೋಡೆ ಕುಸಿತ: ತಾಯಿ, ಮಗ ಸಾವು

ಪಿಟಿಐ
Published 16 ಜುಲೈ 2024, 8:28 IST
Last Updated 16 ಜುಲೈ 2024, 8:28 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಕೊಚ್ಚಿ: ಕೇರಳದ ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಮನೆಯೊಂದರ ಗೋಡೆ ಕುಸಿದು ತಾಯಿ ಮತ್ತು ಮಗ ಮೃತಪಟ್ಟಿದ್ದಾರೆ.

ಪಾಲಕ್ಕಾಡ್ ಜಿಲ್ಲೆಯ ವಡಕ್ಕಂಚೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾಕಾಡ್‌ನಲ್ಲಿ ಈ ಘಟನೆ ವರದಿಯಾಗಿದೆ. ಸುಲೋಚನಾ (53) ಮತ್ತು ಆಕೆಯ ಮಗ ರಂಜಿತ್‌ (33) ಘಟನೆಯಲ್ಲಿ ಮೃತಪಟ್ಟವರು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಸೋಮವಾರ ರಾತ್ರಿ ಮಲಗಿದ್ದ ವೇಳೆ ಮನೆಯ ಗೋಡೆ ಕುಸಿದು ಬಿದ್ದು ತಾಯಿ ಮತ್ತು ಮಗ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಮಧ್ಯ ಮತ್ತು ಉತ್ತರ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಬಿರುಗಾಳಿಯಿಂದ ಮರಗಳು ಉರುಳಿವೆ. ಕೆಲವೆಡೆ ಭೂಕುಸಿತ ಘಟನೆಗಳು ವರದಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚುವರಿ ನೀರನ್ನು ಹೊರಬಿಡಲು ಮಲಂಕರ ಮತ್ತು ಕಲ್ಲರಕುಟ್ಟಿ ಅಣೆಕಟ್ಟುಗಳು ಗೇಟ್‌ ತೆರೆಯಲಾಗಿದ್ದು, ಪೆರಿಯಾರ್‌, ಮುತಿರಪ್ಪುಳ, ತೊಡುಪುಳ ಮತ್ತು ಮುವಾಟ್ಟುಪುಳ ನದಿಗಳ ತೀರದಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.