ADVERTISEMENT

ಮಣಿಪುರ ಹಿಂಸಾಚಾರ: ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಖಂಡನಾ ನಿರ್ಣಯ ಅಂಗೀಕಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಜುಲೈ 2023, 13:31 IST
Last Updated 31 ಜುಲೈ 2023, 13:31 IST
   

ಕೋಲ್ಕತ್ತ: ಮಣಿಪುರ ಹಿಂಸಾಚಾರ ಕುರಿತಂತೆ ಕೇಂದ್ರ ಮತ್ತು ಮಣಿಪುರ ಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಖಂಡನಾ ನಿರ್ಣಯವನ್ನು ಅಂಗೀಕರಿಸಲಾಗಿದೆ.

ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವು ಮಣಿಪುರ ಸಮಸ್ಯೆಯ ಬಗ್ಗೆ ರಾಷ್ಟ್ರಮಟ್ಟದಲ್ಲಿ ಧ್ವನಿಯೆತ್ತಿದೆ. ಈ ವಿಷಯವನ್ನು ಸದನದ ಮುಂದೆ ತರಲು ಮುಂದಾಗಿದ್ದ ಬಗ್ಗೆ 'ಡೆಕ್ಕನ್‌ ಹೆರಾಲ್ಡ್‌' ಜುಲೈ 24ರಂದು ವರದಿ ಮಾಡಿತ್ತು.

‘ಮಣಿಪುರದಲ್ಲಿ ನಡೆದಿರುವ ಹಿಂಸಾತ್ಮಕ ಘಟನೆಗಳು ನಾಚಿಕೆಗೇಡಿನ ಕೃತ್ಯವಾಗಿದೆ. ಅಲ್ಲಿ ಅನೇಕರು ಸಾವಿಗೀಡಾಗಿದ್ದಾರೆ. ಹಲವು ಮನೆಗಳನ್ನು ಸುಟ್ಟು ಹಾಕಲಾಗಿದೆ. ಮಕ್ಕಳು ಸೇರಿದಂತೆ ಸಾರ್ವಜನಿಕರು ಆಹಾರದಿಂದ ವಂಚಿತರಾಗಿದ್ದು, ಮಹಿಳೆಯರಿಗೆ ಗೌರವವಿಲ್ಲ’ ಎಂದು ಸಂಸದೀಯ ವ್ಯವಹಾರಗಳ ಇಲಾಖೆಯ ಸಚಿವ ಸೋಭಾಂದೇಬ್ ಚಟ್ಟೋಪಾಧ್ಯಾಯ ಬೇಸರ ಹೊರಹಾಕಿದ್ದಾರೆ.

ADVERTISEMENT

ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ ನಡೆಸಿದ ಮತ್ತು ಒಬ್ಬ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕೃತ್ಯಕ್ಕೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಸರ್ಕಾರ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ವಿರೋಧ ಪಕ್ಷಗಳ ನಾಯಕರು ಒತ್ತಾಯಿಸಿದ್ದಾರೆ. ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರ ಮತ್ತು ಮಣಿಪುರ ಸರ್ಕಾರವನ್ನು ಟೀಕಿಸಿದ್ದಾರೆ.

ಇದನ್ನೂ ಓದಿ... ಮಣಿಪುರ ವಿಷಯ ಚರ್ಚೆಗೆ ವಿಪಕ್ಷಗಳ ಪಟ್ಟು: ಸಂಸತ್ತಿನ ಉಭಯ ಸದನಗಳ ಕಲಾಪ ಮುಂದಕ್ಕೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.