ADVERTISEMENT

200 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಬಾಲಕ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2020, 14:24 IST
Last Updated 4 ನವೆಂಬರ್ 2020, 14:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನಿವಾರಿ(ಮಧ್ಯಪ್ರದೇಶ): ಐದು ವರ್ಷದ ಬಾಲಕನೊಬ್ಬ 200 ಅಡಿ ಆಳದ ಕೊಳವೆ ಬಾವಿಗೆ ಬುಧವಾರ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

‘ಕಾರ್ಮಿಕರು ಕೊಳವೆ ಬಾವಿಯ ದುರಸ್ತಿ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಬಾಲಕ ಪ್ರಹ್ಲಾದ್‌ ಕೊಳವೆ ಬಾವಿಗೆ ಬಿದ್ದಿದ್ದಾನೆ. ಕೊಳವೆ ಬಾವಿಯಲ್ಲಿ ನೆಲದಿಂದ 100 ಅಡಿಗಳಷ್ಟು ನೀರು ಇದೆ. ಬಾಲಕ ಎಷ್ಟು ಆಳದಲ್ಲಿ ಸಿಲುಕಿಕೊಂಡಿದ್ದಾನೆ ಎಂಬುದು ಸ್ಪಷ್ಟವಾಗಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT