ADVERTISEMENT

ಮಧ್ಯಪ್ರದೇಶ: ಬಿಜೆಪಿಯ ಮೂವರು ಸಚಿವರಿಗೆ ಹಿನ್ನಡೆ

ಪಿಟಿಐ
Published 10 ನವೆಂಬರ್ 2020, 7:36 IST
Last Updated 10 ನವೆಂಬರ್ 2020, 7:36 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಭೋಪಾಲ್‌: ಮಧ್ಯಪ್ರದೇಶದಲ್ಲಿ 28 ಕ್ಷೇತ್ರಗಳ ಪೈಕಿ 17 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದರೂ, ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಸರ್ಕಾರದ ಮೂವರು ಸಚಿವರನ್ನು ಕಾಂಗ್ರೆಸ್‌ ಅಭ್ಯರ್ಥಿಗಳು ಹಿಂದಿಕ್ಕಿದ್ದಾರೆ ಎಂದು ಆರಂಭಿಕ ಹಂತದ ಮತ ಎಣಿಕೆಯಲ್ಲಿ ತಿಳಿದು ಬಂದಿದೆ.

ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಕಾಂಗ್ರೆಸ್‌ ಪಕ್ಷ 9 ಕ್ಷೇತ್ರಗಳಲ್ಲಿ ಮುಂದಿದ್ದು, ಬಹುಜನ ಸಮಾಜ ಪಕ್ಷ(ಬಿಎಸ್‌ಪಿ) ಮೊರೇನಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

ಸಚಿವರಾದ ಐದಲ್‌ ಸಿಂಗ್‌ ಕನ್ಸಾನ, ಗಿರಿಜಾ ದಾಂಡೋಟಿಯ, ಒಪಿಎಸ್‌ ಭದೋರಿಯ ಅವರು ಕ್ರಮವಾಗಿ ಸುಮಾಲಿ, ದಿಮಾನಿ ಮತ್ತು ಮೆಹಗಾಂವ್ ಕ್ಷೇತ್ರಗಳಲ್ಲಿ ಪ್ರತಿಸ್ಪರ್ಧಿ ಕಾಂಗ್ರೆಸ್‌ನಿಂದ ಹಿನ್ನಡೆ ಸಾಧಿಸಿದ್ದಾರೆ. ಇನ್ನುಳಿದ 16 ಕ್ಷೇತ್ರಗಳಲ್ಲಿ ಬಿಜೆಪಿಯು 312 ಮತಗಳ ಅಂತರದಿಂದ ಕಾಂಗ್ರೆಸ್‌ನಿಂದ ಮುಂದಿದೆ. ಕಾಂಗ್ರೆಸ್‌ ಅಭ್ಯರ್ಥಿಗಳು ಸುಮಾಲಿ, ದಿಮ್ನಿ, ಅಂಬಾ, ಮೆಹಗಾಂವ್, ಗೋಹದ್, ಬಂದೇರ್‌, ಕರೇರಾ, ಬೈರೋರಾ ಮತ್ತು ಅಗರ್‌ಗಳಲ್ಲಿ ಮುಂದಿದ್ದಾರೆ.

ADVERTISEMENT

ಬಿಜೆಪಿ ಅಭ್ಯರ್ಥಿ ತುಳಸಿರಾಮ್‌ ಸಿಲಾವತ್‌ ಅವರು ಸಾನ್ವೆರ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ಎದುರಾಳಿಗಿಂತ 8,238 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.