ADVERTISEMENT

ಮತಾಂತರ ತಡೆ: ಮಧ್ಯಪ್ರದೇಶದಲ್ಲಿ ಸುಗ್ರೀವಾಜ್ಞೆಗೆ ಒಪ್ಪಿಗೆ

ಪಿಟಿಐ
Published 29 ಡಿಸೆಂಬರ್ 2020, 16:07 IST
Last Updated 29 ಡಿಸೆಂಬರ್ 2020, 16:07 IST
ನರೋತ್ತಮ್‌ ಮಿಶ್ರಾ
ನರೋತ್ತಮ್‌ ಮಿಶ್ರಾ   

ಭೋಪಾಲ್‌: ಮದುವೆಯಾಗುವ ಏಕೈಕ ಉದ್ದೇಶದಿಂದ ಅಥವಾ ವಂಚಿಸಿ ಧಾರ್ಮಿಕ ಮತಾಂತರ ಮಾಡುವುದಕ್ಕೆ ಕಡಿವಾಣ ಹಾಕುವ ಕುರಿತ ಸುಗ್ರೀವಾಜ್ಞೆಗೆ ಮಧ್ಯಪ್ರದೇಶ ಬಿಜೆಪಿ ಸರ್ಕಾರ ಒಪ್ಪಿಗೆ ನೀಡಿದ್ದು, ಅದನ್ನು ರಾಜ್ಯಪಾಲರ ಸಮ್ಮತಿಗಾಗಿ ಕಳುಹಿಸಿದೆ.

ನಿಯಮಗಳನ್ನು ಉಲ್ಲಂಘಿಸುವವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶ ಕಾನೂನಿನಲ್ಲಿ ಇರಲಿದೆ. ಇತ್ತೀಚೆಗಷ್ಟೇ ಉತ್ತರ ಪ್ರದೇಶ ಸರ್ಕಾರವು ಇದೇ ಮಾದರಿಯ ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು.

ಮದುವೆ ಮೂಲಕ ಮತಾಂತರ ಅಥವಾ ಒತ್ತಾಯ ಪೂರ್ವಕವಾಗಿ ಮತಾಂತರ ಮಾಡುವವರಿಗೆ ₹1 ಲಕ್ಷ ದಂಡ ವಿಧಿಸುವ ಅವಕಾಶವೂ ಇದರಲ್ಲಿದೆ. ‘ಕೋವಿಡ್‌–19 ಕಾರಣದಿಂದಾಗಿ ವಿಧಾನಸಭೆ ಚಳಿಗಾಲದ ಅಧಿವೇಶನ ರದ್ದುಗೊಂಡಿರುವ ಕಾರಣ, ಸುಗ್ರೀವಾಜ್ಞೆ ಮುಖಾಂತರ ಸರ್ಕಾರ ಈ ಕಾಯ್ದೆ ತರಲಿದೆ. ಇದಕ್ಕೆ ಒಪ್ಪಿಗೆ ಪಡೆಯಲು ರಾಜ್ಯಪಾಲರಾದ ಆನಂದಿಬೆನ್‌ ಪಟೇಲ್‌ ಅವರಿಗೆ ಕಳುಹಿಸಲಾಗಿದೆ’ ಎಂದು ಗೃಹ ಸಚಿವ ನರೋತ್ತಮ್‌ ಮಿಶ್ರಾ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.