ADVERTISEMENT

ಮಧ್ಯಪ್ರದೇಶ: ಕಾಂಗ್ರೆಸ್ ಶಾಸಕ ಲೋಧಿ ಬಿಜೆಪಿಗೆ ಸೇರ್ಪಡೆ

MP: Cong MLA quits party, joins BJP

ಪಿಟಿಐ
Published 12 ಜುಲೈ 2020, 11:15 IST
Last Updated 12 ಜುಲೈ 2020, 11:15 IST
ಮಧ್ಯಪ್ರದೇಶದಲ್ಲಿ ಭಾನುವಾರ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ಶಾಸಕ ಪ್ರದ್ಯುಮ್ನ ಸಿಂಗ್ ಲೋಧಿ ಅವರು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಸಿಹಿ ತಿನ್ನಿಸಿದರು. ಮಧ್ಯಪ್ರದೇಶದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿ.ಡಿ. ಶರ್ಮಾ ಅವರೂ ಚಿತ್ರದಲ್ಲಿದ್ದಾರೆ –ಪಿಟಿಐ ಚಿತ್ರ 

ಭೋಪಾಲ್‌: ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ಪ್ರದ್ಯುಮ್ನ ಸಿಂಗ್ ಲೋಧಿ ಅವರು ಶಾಸಕ ಸ್ಥಾನ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿ ಭಾನುವಾರ ಬಿಜೆಪಿ ಸೇರಿದರು.

ಬಡಾ ಮಲ್ಹೇರಾ ಕ್ಷೇತ್ರದ ಶಾಸಕರಾಗಿರುವ ಲೋಧಿ ಅವನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ಅವರು ಪಕ್ಷಕ್ಕೆ ಬರಮಾಡಿಕೊಂಡರು.

‘ನಾನು ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಅಂಗೀಕಾರವಾಗಿದೆ. ಕೇವಲ ಬಿಜೆಪಿ ಮಾತ್ರ ನನ್ನ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿಪಡಿಸಬಲ್ಲದು. ನನ್ನ ಕ್ಷೇತ್ರದಲ್ಲಿನ ಅಭಿವೃದ್ಧಿನ ಯೋಜನೆಗಳಿಗೆ ಮುಖ್ಯಮಂತ್ರಿ ಕೂಡಾ ಒಪ್ಪಿಗೆ ನೀಡಿದ್ದಾರೆ’ ಎಂದು ಲೋಧಿ, ಪತ್ರಕರ್ತರಿಗೆ ತಿಳಿಸಿದ್ದಾರೆ.

ADVERTISEMENT

ಲೋಧಿ ಅವರ ರಾಜೀನಾಮೆಯಿಂದಾಗಿ ಮಧ್ಯಪ್ರದೇಶದ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಬಲ 91ಕ್ಕೆ ಇಳಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.