ADVERTISEMENT

ಪಾಕಿಸ್ತಾನ ಜೈಲಿನಲ್ಲಿದ್ದ ವ್ಯಕ್ತಿ 23 ವರ್ಷದ ಬಳಿಕ ಭಾರತಕ್ಕೆ

ಪಿಟಿಐ
Published 31 ಆಗಸ್ಟ್ 2021, 13:59 IST
Last Updated 31 ಆಗಸ್ಟ್ 2021, 13:59 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಭೋಪಾಲ್‌: 23 ವರ್ಷಗಳ ಹಿಂದೆ ಗಡಿ ದಾಟಿ ಪಾಕಿಸ್ತಾನ ಪ್ರವೇಶಿಸಿ, ಅಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಮಧ್ಯಪ್ರದೇಶದ ಸಾಗರ್‌ ಜಿಲ್ಲೆಯ 57 ವರ್ಷದ ವ್ಯಕ್ತಿಯೊಬ್ಬರು ಭಾರತಕ್ಕೆ ಮರಳಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಸಾಗರ್‌ ಜಿಲ್ಲೆಯ ಘೋಶಿ ಪಟ್ಟಿ ಗ್ರಾಮದ ಪ್ರಹ್ಲಾದ್‌ ಸಿಂಗ್‌ ರಜಪೂತ್‌ ಅವರನ್ನು ಪಾಕಿಸ್ತಾನದ ಅಧಿಕಾರಿಗಳು ಪಂಜಾಬ್‌ನ ವಾಘಾ ಗಡಿಯ ಮೂಲಕ ಭಾರತದ ಗಡಿ ಭದ್ರತಾ ಪಡೆಗೆ ಹಸ್ತಾಂತರಿಸಿದರು ಎಂದೂ ಹೇಳಿದ್ದಾರೆ.

1998 ರಿಂದ ಪ್ರಹ್ಲಾದ್‌ ಸಿಂಗ್‌ ನಾಪತ್ತೆಯಾಗಿದ್ದರು. ಅವರು ಹೇಗೆ ಗಡಿ ದಾಟಿ ಪಾಕಿಸ್ತಾನ ತಲುಪಿದರು ಎಂಬುದು ತಿಳಿದಿಲ್ಲ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ADVERTISEMENT

ಪ್ರಹ್ಲಾದ್‌ ಅವರನ್ನು ಮೊದಲಿಗೆ ಪಾಕ್ ಆಕ್ರಮಿತ ಕಾಶ್ಮೀರದ ಜೈಲಿನಲ್ಲಿರಿಸಲಾಗಿತ್ತು ಅನಂತರ ರಾವಲ್ಪಿಂಡಿ ಜೈಲಿಗೆ ಸ್ಥಳಾಂತರಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.